ಬೆಂಗಳೂರು: ಎನ್‌ಇಪಿ ರದ್ದುಗೊಳಿಸುವ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ತಜ್ಞರು ಮತ್ತು ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸೋಮವಾರ ಸಭೆ ನಡೆಸಲಿದ್ದಾರೆ.
ಈ ವೇಳೆ ರಾಜ್ಯ ಶಿಕ್ಷಣ ನೀತಿಯನ್ನು (ಎಸ್‌ಇಪಿ) ರೂಪಿಸಲು ಸರ್ಕಾರವು ಸಮಿತಿಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
ಉನ್ನತ ಶಿಕ್ಷಣ ಇಲಾಖೆಯ ಅಧಿಕೃತ ಮೂಲಗಳ ಪ್ರಕಾರ, ಎನ್‌ಇಪಿಯನ್ನು ಜಾರಿಗೊಳಿಸುವುದಿಲ್ಲ ಎಂದು ಘೋಷಿಸಿದ ನಂತರ ಸರ್ಕಾರವು ಹೊಸ ರಾಜ್ಯ ಶಿಕ್ಷಣ ನೀತಿಯ ಮಾರ್ಗಸೂಚಿಗಳನ್ನು ನಿರ್ಧರಿಸಬೇಕಿದೆ.
ಎಸ್‌ಇಪಿ ಜೊತೆಗೆ, ಸಿದ್ದರಾಮಯ್ಯ ಅವರು ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ, ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ, ಅತಿಥಿ ಅಧ್ಯಾಪಕರ ನೇಮಕಾತಿ ಮತ್ತು ಸಂಭಾವನೆ ಸೇರಿದಂತೆ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಸಾಮಾನ್ಯ ಶೈಕ್ಷಣಿಕ ಕ್ಯಾಲೆಂಡರ್ ಮತ್ತು ಕೆಲವು ಸಂಸ್ಥೆಗಳನ್ನು ಶ್ರೇಷ್ಠ ಸಂಸ್ಥೆಗಳಾಗಿ ಮೇಲ್ದರ್ಜೆಗೆ ಏರಿಸುವ ಬಗ್ಗೆಯೂ ಚರ್ಚಿಸಲಿದ್ದಾರೆ.
‘ಮುಖ್ಯಮಂತ್ರಿ ಮಟ್ಟದಲ್ಲಿ ಚರ್ಚೆಯ ಅಗತ್ಯವಿರುವ ಏಕೈಕ ವಿಷಯವೆಂದರೆ ಅದು ಎಸ್‌ಇಪಿ ಆಗಿದೆ. ಇತರ ಸಮಸ್ಯೆಗಳಿಗೆ ಹಣಕಾಸಿನ ನೆರವು ಬೇಕಾಗುತ್ತದೆ’ ಎಂದು ಅಧಿಕಾರಿ ಹೇಳಿದರು.
‘ಅಂಬೇಡ್ಕರ್ ಅಂಬೇಡ್ಕರ್ ಎನ್ನುವುದು ಈಗ ಒಂದು ಫ್ಯಾಶನ್ ಆಗಿಬಿಟ್ಟಿದೆ. ಹೀಗೆ ಹೇಳುವವರು ಭಗವಂತನ ಹೆಸರನ್ನಾದರೂ ಇಷ್ಟು ಬಾರಿ ಸ್ಮರಿಸಿದ್ದರೆ ಅವರಿಗೆ…
ರಸ್ತೆ ಬದಿಯೇ ಕಸದ ವಾಹನ ನಿಲುಗಡೆಗೊಳಿಸಬೇಕಾದ ಪರಿಸ್ಥಿತಿ; ದುರ್ವಾಸನೆಯಿಂದ ಸಾರ್ವಜನಿಕರಿಕೆ ಕಿರಿಕಿರಿ ಕೃಷ್ಣ ಸಿದ್ದಾಪುರ ಸಿದ್ದಾಪುರ: ಪಟ್ಟಣದಲ್ಲಿ ಕಸ ವಿಲೇವಾರಿ…
ಭೇರ್ಯ: ಸಂಜೆ ನಂತರ ನಿಲ್ದಾಣದೊಳಗೆ ಬಾರದ ಬಸ್ಗಳು; ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ ಇಲ್ಲ ಭೇರ್ಯ ಮಹೇಶ್ ಭೇರ್ಯ: ಗ್ರಾಮದ…
ಕೀರ್ತಿ ಇದನ್ನು ನೀವು ಊಹಿಸಲೂ ಸಾಧ್ಯವಿಲ್ಲ. ಚಹ ಮಾಡಿದ ನಂತರ ಉಳಿದ ಜೊಗಟು, ಈರುಳ್ಳಿ ಸಿಪ್ಪೆ, ಚಿಂದಿ ಬಟ್ಟೆ, ಹರಿದ…
ಅಮೆರಿಕದ ಸಿಯಾಟಲ್ನಲ್ಲಿ ಮಗನಿಗೆ ಹೊಸ ಕೆಲಸ ಸಿಕ್ಕಿತ್ತು. ಮನೆ ಮಾಡಿದ. ಅಲ್ಲಿ ಮನೆ ಶಿಫ್ಟ್ ಮಾಡುವುದೆಂದರೆ ನಾವೇ ಸಕಲವೂ ಆಗಿರುವುದರಿಂದ…
ಮುಂಚೆ ಕಾಲವೊಂದಿತ್ತು. ಸಮಯ ಕಳೆಯಲು ಎಲ್ಲರೂ ಪುಸ್ತಕದ ಮೊರೆ ಹೋಗು ತ್ತಿದ್ದರು. ಮನೆ ಹತ್ತಿರದ ಪುಸ್ತಕ ದಂಗಡಿ, ಗ್ರಂಥಾಲಯ, ಸ್ನೇಹಿತರ…