ಮೋರ್ಗನ್‌ಟೌನ್ : ಅಮೆರಿಕದಾದ್ಯಂತ ಆಸ್ಪತ್ರೆಗಳಲ್ಲಿರುವ ರೋಗಿಗಳು ’ಕ್ಯಾಂಡಿಡಾ ಔರಿಸ್’ ಎಂಬ ಹೆಸರಿನ ಶಿಲೀಂಧ್ರ ಸೋಂಕಿನಿಂದ ಅಲರ್ಜಿಗೆ ತುತ್ತಾಗಿ ಸಾವಿಗೀಡಾಗುತ್ತಿದ್ದಾರೆ. ಈ ಸೋಂಕು ತೀವ್ರವಾಗಿ ಹಬ್ಬುತ್ತಿದ್ದು ಎಚ್ಚರದಿಂದ ಇರಬೇಕೆಂದು ಅಮೆರಿಕದ ರೋಗ ನಿಯಂತ್ರಣ ಕೇಂದ್ರ ತಿಳಿಸಿದೆ.
ಇತ್ತೀಚೆಗೆ ಪತ್ತೆಯಾದ ಈ ರೋಗಕಾರಕ ಫಂಗಸ್ ಪ್ರಮಾಣದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುತ್ತಿದ್ದು ಮುಖ್ಯವಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳಿಗೆ ಅಲರ್ಜಿ ಉಂಟುಮಾಡಿ ಅವರ ಸಾವಿಗೆ ಕಾರಣವಾಗಿರುವುದು, ಅಮೆರಿಕದ ಜನತೆಗೆ ಆತಂಕವನ್ನುಂಟು ಮಾಡಿದೆ.
ಏನಿದು ಕ್ಯಾಂಡಿಡಾ ಔರಿಸ್?: ಇದು ಪ್ರಥಮಬಾರಿಗೆ 2009ರಲ್ಲಿ ಕಂಡುಬಂತು. ಕ್ಯಾಂಡಿಡಾ ಏಕಕೋಶ ಶಿಲೀಂಧ್ರವಾಗಿದ್ದು, 2019ರಿಂದ ಅಮೆರಿಕದಲ್ಲಿ ಈ ಸೋಂಕಿನ ಪ್ರಮಾಣದಲ್ಲಿ ಹೆಚ್ಚಳಕಂಡುಬರುತ್ತಿದೆ. ಮನುಷ್ಯನ ಜೀವಕ್ಕೇ ಅಪಾಯ ತಂಡೊಡ್ಡುವ ಕ್ಯಾಂಡಿಡಾ, ಸದ್ಯಕ್ಕಿರುವ ಫಂಗಸ್ ನಿರೋಧಕ ಔಷಧಗಳ ವಿರುದ್ಧ ಪ್ರತಿರೋಧಿಸುವ ಸಾಮರ್ಥ್ಯ ಹೊಂದಿದೆ.
ಇದು ಆರೋಗ್ಯವಂತರಿಗೆ ಹೆಚ್ಚಾಗಿ ಬಾಧಿಸದೇ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗೇ ಹೆಚ್ಚಾಗಿ ತಗುಲುತ್ತಿದೆ ಎಂದು ರೋಗ ನಿಯಂತ್ರಣ ಕೇಂದ್ರ ತಿಳಿಸಿದೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…