BREAKING NEWS

ಬಿಜೆಪಿಯವರನ್ನು ಕೇಳಿಕೊಂಡು ಅಧಿಕಾರ ಮಾಡಲು ಆಗುವುದಿಲ್ಲ: ಡಾ.ಜಿ.ಪರಮೇಶ್ವರ್

ಬೆಂಗಳೂರು: ಬಿಜೆಪಿಯವರು ಈಗ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಮಾತನ್ನಾಡುತ್ತಿದ್ದಾರೆ. ದೇಶದ ಆಡಳಿತ ವ್ಯವಸ್ಥೆಯಲ್ಲಿ ಸಂವಿಧಾನವೇ ಭಗವದ್ಗೀತೆ, ಬೈಬಲ್, ಕುರಾನ್. ಸಂವಿಧಾನ ಭಾರತೀಯರಿಗೆ ಗ್ರಂಥ ಇದ್ದಂತೆ. ಕಲಂ 25ರಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಗೂ ಧರ್ಮ ಆಯ್ಕೆಯ ಹಕ್ಕು ನೀಡಿದೆ. ಅದಕ್ಕೆ ವಿರುದ್ಧವಾಗಿ ಬಿಜೆಪಿಯವರು ಮತಾಂತರ ನಿಷೇಧ ಕಾಯ್ದೆ ಮಾಡಿದ್ದರು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು.

ಬಿಜೆಪಿ ಸರ್ಕಾರ ಮಾಡಿದ ಕಾಯ್ದೆ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಸದನದಲ್ಲಿ ಮಸೂದೆ ಮಂಡಿಸಿದ ವೇಳೆಯೇ ಹೇಳಿದ್ದೆವು. ಈಗ ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಿದೆ. ನಮ್ಮ ಸರ್ಕಾರಕ್ಕೆ ಸಂವಿಧಾನದ ಮೇಲೆ ನಂಬಿಕೆ ಇದೆ. ಹಾಗಾಗಿ ನಾವು ಮತಾಂತರ ನಿಷೇಧ ಕಾಯ್ದೆಯನ್ನು ಹಿಂತೆಗೆದುಕೊಳ್ಳುತ್ತಿದ್ದೇವೆ ಎಂದರು.

ಬಿಜೆಪಿ ವಿರುದ್ಧ ಪರಂ ವಾಗ್ದಾಳಿ: ಅಕ್ಕಿ ಪೂರೈಕೆ ತಿಕ್ಕಾಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರನ್ನು ಕೇಳಿಕೊಂಡು ಅಧಿಕಾರ ಮಾಡಲು ಆಗುವುದಿಲ್ಲ. ನಾವು ಈಗಾಗಲೇ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೇವೆ. ಅದರಂತೆ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ. ಎಷ್ಟೇ ಕಷ್ಟವಾದರೂ ಜಾರಿಗೊಳಿಸುತ್ತೇವೆ. ಜನಪರ ಆಡಳಿತ ಕೊಡುವ ವಿಚಾರವಾಗಿ ರಾಜಿ ಪ್ರಶ್ನೆಯೇ ಇಲ್ಲ. ಇವರನ್ನು ಕೇಳಿಕೊಂಡು ನಾವು ಆಡಳಿತ ಮಾಡಬೇಕೇ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಮರಳು ಮಾಫಿಯಾ ತಲೆ ಎತ್ತಿದೆ ಎಂಬ ಬಿಜೆಪಿ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದ ಅಗತ್ಯವಿಲ್ಲ. ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ ಮಾಡುತ್ತೇವೆ ಎಂದರು.

ನೀವು ಸಿಎಂ ಆಗುತ್ತೀರಾ ಎಂದು ಕೇಳಿತ್ತಿದ್ದಂತೆ ಉತ್ತರ ನೀಡದೆ ತೆರಳಿದರು. ‘ಅದೊಂದನ್ನ ಬಿಟ್ಟು ಬೇರೆ ಏನು ಬೇಕಾದರೂ ಕೇಳಿ’ ಎಂದಷ್ಟೆ ಹೇಳಿದರು.

andolanait

Recent Posts

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

6 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

12 mins ago

ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…

33 mins ago

ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…

49 mins ago

ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿ ಬಂಧನ

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…

1 hour ago

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…

2 hours ago