Mysore
24
heavy intensity rain

Social Media

ಗುರುವಾರ, 09 ಏಪ್ರಿಲ 2026
Light
Dark

ಕಾರು ಅಪಘಾತ : ಶಾಸಕ ರಾಜೇಶ್‌ ನಾಯ್ಕ್‌ ಆಸ್ಪತ್ರೆಗೆ ದಾಖಲು!

ದಕ್ಷಿಣ ಕನ್ನಡ : ಸಂಕ್ರಾಂತಿಯ ಪ್ರಯುಕ್ತ ದೇವಸ್ಥಾನಕ್ಕೆ ತೆರಳಿ ವಾಪಾಸ್ ಆಗುತ್ತಿದ್ದಂತ ವೇಳೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ತೆರಳುತ್ತಿದ್ದಂತ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಶಾಸಕ ರಾಜೇಶ್ ನಾಯ್ಕ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ತೆಂಕ ಎಡಪದವುನಲ್ಲಿ ಶಾಸಕ ರಾಜೇಶ್ ನಾಯಕ್ ಕಾರಿಗೆ ಸ್ವಿಫ್ಟ್ ಕಾರೊಂದು ಡಿಕ್ಕಿಯಾಗಿದೆ. ಹೀಗೆ ಉಂಟಾದಂತ ಡಿಕ್ಕಿಯಲ್ಲಿ ಶಾಸಕ ರಾಜೇಶ್ ನಾಯಕ್ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋದಾಗಿ ತಿಳಿದು ಬಂದಿದೆ.

ಸಂಕ್ರಾಂತಿಯ ಅಂಗವಾಗಿ ಎಡಪದವುನಲ್ಲಿದ್ದಂತ ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳಿ, ಪೂಜೆ ಸಲ್ಲಿಸಿ ಮೂಡಬಿದ್ರಿಗೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಸ್ವಿಫ್ಟ್ ಕಾರು ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ಆನಂತ್ರ ಆತನನ್ನು ಗುರುಪುರದಲ್ಲಿ ಹಿಡಿದು ಪೊಲೀಸರಿಗೆ ಸ್ಥಳೀಯರು ಒಪ್ಪಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!