ಕಾರಿನ ಟೈರ್‌ ಬರ್ಸ್ಟ್‌; ಸ್ಥಳದಲ್ಲೇ ಪ್ರಾಣಬಿಟ್ಟ ತಾಯಿ, ಮಗ!

ಮೈಸೂರು: ಚಲಿಸುತ್ತಿದ್ದ ಕಾರಿನ ಟೈರ್‌ ಬರ್ಸ್ಟ್‌ ಆಗಿ, ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆ ಬಳಿ ನಡೆದಿದೆ.

ದೈವಿಕ್ (12), ಗುಣಲಕ್ಷ್ಮಿ (35) ಮೃತಪಟ್ಟವರು. ಇನ್ನೂ ಕಾರು ಚಾಲನೆ ಮಾಡುತ್ತಿದ್ದ ಪತಿ ಜಗದೀಶ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಮುಂಜಾನೆ 4.30 ಸಮಯದಲ್ಲಿ ಘಟನೆ ಸಂಭವಿಸಿದ್ದು, ಈ ಸಂಬಂಧ ಕುವೆಂಪು ನಗರ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

× Chat with us