ಅಮ್ರೇಲಿ : ಎಕ್ಸಾಂ ಹಾಲ್‌ಗೆ ಬಂದ 9ನೇ ತರಗತಿ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವನ್ನಪ್ಪಿರೋ ದಾರಣ ಘಟನೆ ಗುಜರಾತ್‌ನಲ್ಲಿ ನಡೆದಿದೆ. ವಿದ್ಯಾರ್ಥಿನಿ ಸಾಕ್ಷಿ ರಾಜೋಸಾರ ಹೃದಯ ಸ್ತಂಭನದಿಂದಲೇ ಕೊನೆಯುಸಿರೆಳೆದಿರುವ ಶಂಕೆ ವ್ಯಕ್ತವಾಗಿದೆ. ಪರೀಕ್ಷಾ ಕೇಂದ್ರದಲ್ಲಿ 15 ವರ್ಷದ ಬಾಲಕಿ ಹಠಾತ್ ಸಾವನ್ನಪ್ಪಿರೋದು ಆತಂಕವನ್ನು ಹೆಚ್ಚಿಸಿದೆ.
ಗುಜರಾತ್ ಅಮ್ರೇಲಿಯ ಶಾಂತಬಾ ಗಜೇರಾ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ. ಸಾಕ್ಷಿ ರಾಜೋಸಾರ ಎಂಬ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಶಾಲೆಗೆ ಬಂದಿದ್ದಳು. ಈ ವೇಳೆ ಕ್ಲಾಸ್ ರೂಮ್ ಪ್ರವೇಶಿಸುವಾಗ ಕೆಳಗೆ ಬಿದ್ದಿದ್ದಾಳೆ. ತರಗತಿಯಲ್ಲಿದ್ದ ಶಿಕ್ಷಕರು ಮತ್ತು ಸಹಪಾಠಿಗಳು ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಚಿಕಿತ್ಸೆ ನೀಡಿದ ವೈದ್ಯರು ಬಾಲಕಿಯು ಹೃದಯ ಸ್ತಂಭನದಿಂದಲೇ ಸಾವನ್ನಪ್ಪಿದ್ದಾಳೆ ಎಂದು ಹೇಳಿದ್ದಾರೆ.
ಗುಜರಾತ್‌ನಲ್ಲಿ ಇತ್ತೀಚೆಗೆ ಗರ್ಬಾ ನೃತ್ಯದ ವೇಳೆ ಹಲವರು ಹೃದಯಾಘಾತಕ್ಕೆ ಒಳಗಾಗಿದ್ದರು. ಕೇವಲ 24 ಗಂಟೆಯಲ್ಲೇ 10 ಮಂದಿ ಸಾವನ್ನಪ್ಪಿದ್ದು ಬೆಚ್ಚಿ ಬೀಳುವಂತೆ ಮಾಡಿತ್ತು. ಈ ದುರಂತ ಮಾಸುವ ಮುನ್ನವೇ ಗುಜರಾತ್‌ನಲ್ಲಿ 15 ವರ್ಷದ ಬಾಲಕಿ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾಳೆ. ಗುಜರಾತ್‌ನಲ್ಲಿ ಹೃದಯಾಘಾತ, ಹೃದಯಸ್ತಂಭನದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಳವಾಗಿರೋದು ಆತಂಕಕ್ಕೆ ಕಾರಣವಾಗಿದೆ.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…