Mysore
15
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಮನೆ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಬಳಕೆ ಪ್ರಕರಣ : ಎಚ್ ಡಿಕೆ ವಿರುದ್ಧ ಎಫ್ಐಆರ್

ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಜೆಪಿ ನಗರದ ನಿವಾಸಕ್ಕೆ ದೀಪಾವಳಿ ಹಬ್ಬದ ಪ್ರಯುಕ್ತ ವಿದ್ಯುತ್ ದೀಪ ಅಲಂಕಾರ ಮಾಡಲು ಬೀದಿ ಬದಿಯ ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಿಕೊಂಡಿದ್ದ ಆರೋಪದಡಿ ಎಫ್ಐಆರ್ ದಾಖಲಾಗಿದೆ.

ಜಯನಗರ ಪೊಲೀಸ್ ಠಾಣೆಯಲ್ಲಿ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಕುಮಾರಸ್ವಾಮಿಯವರ ವಿರುದ್ಧ ಭಾರತೀಯ ವಿದ್ಯುತ್ ಕಾಯಿದೆ 135ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. 71ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಎಫ್ ಐ ಆರ್ ಪ್ರತಿಯನ್ನು ಸಲ್ಲಿಸಲಿದ್ದಾರೆ.

ಇನ್ನು ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಿ ಕೊಂಡಿದ್ದೀರಾ ಕುರಿತು ಎಚ್ ಡಿಕೆ ವಿರುದ್ಧ ದೊಡ್ಡಮಟ್ಟದಲ್ಲಿಯೇ ಟಿಕಾ ಪ್ರಹಾರ ಮಾಡಿತ್ತು. ಈ ಕುರಿತು ಕುಮಾರಸ್ವಾಮಿ ಅವರು ಕೂಡ ಅದಷ್ಟೇ ಅಲ್ಲದೆ ಕಾಂಗ್ರೆಸ್ ಹೇಳಿಕೆಗೆ ಟಾಂಗ್ ನೀಡಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!