BREAKING NEWS

ರೀಲ್ಸ್‌ ಮಾಡುವಾಗ ಜಲಪಾತಕ್ಕೆ ಬಿದ್ದು ಯುವಕ ನಾಪತ್ತೆ ಪ್ರಕರಣ : ವಾರದ ಬಳಿಕ ಪತ್ತೆಯಾದ ಮೃತದೇಹ

ಉಡುಪಿ : ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತದಲ್ಲಿ ರೀಲ್ಸ್‌ ಮಾಡಲು ಹೋಗಿ ಜಲಪಾತಕ್ಕೆ ಜಾರಿ ಬಿದ್ದು ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ (23) ಮೃತಪಟ್ಟ ಯುವಕ

ಕಳೆದೆರಡು ದಿನಗಳಿಂದ ಮಳೆ ಇಳಿಮುಖವಾಗಿದ್ದು ನೀರಿನ ಹರಿವು ಕಡಿಮೆಯಾಗಿದೆ. ಇದರಿಂದಾಗಿ ಫಾಲ್ಸ್ ನಲ್ಲಿ ಶರತ್ ಬಿದ್ದ ಸಮೀಪದ ಕಲ್ಲು ಪೊಟರೆಯೊಳಗೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಶರತ್ ಕಳೆದ ಭಾನುವಾರ ಸ್ನೇಹಿತನೊಂದಿಗೆ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದರು. ಮಧ್ಯಾಹ್ನ 3:30ರ ಸುಮಾರಿಗೆ ಜಲಪಾತ ಬಳಿ ಬಂಡೆಯ ಮೇಲೆ ನಿಂತಿದ್ದ ಶರತ್ ಆಕಸ್ಮಿಕವಾಗಿ ಕಾಲು ಜಾರಿ ಆಯತಪ್ಪಿ ಬಿದ್ದು ಸೌಪರ್ಣಿಕ ನದಿ ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದರು. ಅವರು ಜಲಪಾತಕ್ಕೆ ಬೀಳುತ್ತಿದ್ದ ದೃಶ್ಯಗಳು ಸ್ನೇಹಿತನ ಮೊಬೈಲ್ ನಲ್ಲಿ ಸೆರೆಯಾಗಿತ್ತು.

ಶರತ್ ಅವರೊಂದಿಗಿದ್ದ ಸ್ನೇಹಿತ ಮಾಹಿತಿ ನೀಡಿದ ತರುವಾಯ ಆತನ ಪತ್ತೆಗೆ ಶೋಧ ಕಾರ್ಯ ಬಿರುಸುಗೊಂಡಿತ್ತು. ಕೊಲ್ಲೂರು ಠಾಣೆ ಉಪನಿರೀಕ್ಷಕಿಯರಾದ ಜಯಶ್ರೀ, ಸುಧಾರಾಣಿ, ಠಾಣೆ ಸಿಬ್ಬಂದಿ, ಅರಣ್ಯ ಇಲಾಖೆ, ಎಸ್.ಡಿ.ಆರ್.ಎಫ್ ತಂಡ, ಉಡುಪಿ, ಬೈಂದೂರು, ಕುಂದಾಪುರ ಅಗ್ನಿಶಾಮಕ ತಂಡದ ನೇತೃತ್ವದಲ್ಲಿ ಕಳೆದ ಒಂದು ವಾರದಿಂದ ವಿಪರೀತ ಮಳೆ, ಇಂಬಳದ (ಜಿಗಣೆ) ಹುಳುಗಳು, ಕಡಿದಾದ ರಸ್ತೆಯಲ್ಲಿ ಸಾಗಿ ಕಾರ್ಯಾಚರಣೆ ನಡೆಸಲಾಗಿತ್ತು.

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

6 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago