Mysore
20
clear sky
Light
Dark

ಜಾತಿ ಗಣತಿ: ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಎಚ್‌ಡಿಕೆ!

ರಾಮನಗರ : ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆ ಬೆನ್ನಲ್ಲೇ, ರಾಜ್ಯದಲ್ಲಿಯೂ ಜಾತಿ ಗಣತಿ ವರದಿ ಬಿಡುಗಡೆಗೆ ಒತ್ತಾಯ ಕೇಳಿಬಂದಿರುವಂತೆಯೇ, ಈ ವಿಚಾರದಲ್ಲಿ  ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬಿಡದಿಯ ಕೇತಗಾನಹಳ್ಳಿಯ ಭಾನುವಾರ ನಡೆದ ರಾಮನಗರ ಜಿಲ್ಲೆಯ ಜೆಡಿಎಸ್ ಮುಖಂಡರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಜಾತಿ ಗಣತಿ ವರದಿ ವಿಚಾರದಲ್ಲಿ ಸರ್ಕಾರ ರಾಜಕೀಯ ಮಾಡುತ್ತಿದೆ. ಸಮ್ಮಿಶ್ರ ಸರ್ಕಾರ ಅವಧಿಯಲ್ಲಿ ಕಾಂತರಾಜು ವರದಿಯನ್ನು  ಕುಮಾರಸ್ವಾಮಿ ಒಪ್ಪಲಿಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಸದಸ್ಯ ಕಾರ್ಯದರ್ಶಿ ಸಹಿ ಇಲ್ಲದೆ ಆ ವರದಿಯನ್ನು ಸ್ವೀಕಾರ ಮಾಡುವುದು ಹೇಗೆ? ಎನ್ನುವ ಅರಿವು ಸಿದ್ದರಾಮಯ್ಯ ಅವರಿಗೆ ಇಲ್ಲ ಎಂದು ತಿರುಗೇಟು ನೀಡಿದರು.

ಸಮ್ಮಿಶ್ರ ಸರ್ಕಾರ ಸಂದರ್ಭದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಒಮ್ಮೆಯಾದರೂ ಕಾಂತರಾಜು ವರದಿ ಬಗ್ಗೆ ಸಿದ್ದರಾಮಯ್ಯ ಚರ್ಚೆ ಮಾಡಿಲ್ಲ.  14 ತಿಂಗಳಲ್ಲಿ ಯಾವತ್ತಾದ್ರು ಈ ಬಗ್ಗೆ ಮಾತಾಡುತ್ತಿದ್ರಾ? ಜಾತಿಗಣತಿ ಮುಖ್ಯವಲ್ಲ, ಎಲ್ಲ ಜಾತಿಯಲ್ಲಿರುವ ಬಡವರಿಗೆ ಅನುಕೂಲ ಮಾಡಿಕೊಡಬೇಕು ಎಂದು ಕಿಡಿಕಾರಿದರು.

ಜಾತ್ಯತೀತ ಎನ್ನುವ ಕಾಂಗ್ರೆಸ್ ನವರು ಜಾತಿ ಗಣತಿ ವರದಿಯಿಂದ ಜಾತಿ ಜಾತಿ ನಡುವೆ ವಿಷ ಬೀಜ ಬಿತ್ತಲು ಹೊರಟಿದ್ದಾರೆ.ಇದರಿಂದ ಏನು ಸಾಧನೆ ಮಾಡುತ್ತಾರೆ? ಸಮಾಜ ಹೊಡೆಯಲು ಮಾಡುತ್ತಾರೋ? ಸಮಾಜದಲ್ಲಿ ವಿಶ್ವಾಸಕ್ಕೆ ಧಕ್ಕೆ ತರಲು ಮಾಡುತ್ತಾರೋ ? ಒಗ್ಗಟ್ಟು ತರಲು ಮಾಡುತ್ತೀರೋ ಮೊದಲು ಅದನ್ನ ತಿಳಿಸಿ ಎಂದು ವಾಗ್ದಾಳಿ ನಡೆಸಿದರು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ