Mysore
22
broken clouds

Social Media

ಸೋಮವಾರ, 13 ಜನವರಿ 2025
Light
Dark

ಮೈಸೂರು ವಿವಿ ಸಂಶೋಧಕರ ನಿಲಯದಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ಅನಾಹುತ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ವಿದ್ಯಾರ್ಥಿ ನಿಲಯದಲ್ಲಿ ಭಾನುವಾರ (ಜುಲೈ.7) ಬೆಳ್ಳಂಬೆಳಿಗ್ಗೆಯೇ ಅಗ್ನಿ ಅವಘಡ ಸಂಭವಿಸಿದೆ.

ವಿದ್ಯಾರ್ಥಿ ನಿಲಯದ ಪವರ್‌ ಪ್ಯಾನೆಲ್‌ನಲ್ಲಿ ಇಂದು ಬೆಳಿಗ್ಗೆ ದಿಢೀರ್‌ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಪವರ್‌ ಪ್ಯಾನೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗ್ರೌಂಡ್‌ ಪ್ಲೋರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನೋಡನೋಡುತ್ತಿದ್ದಂತೆ ಬೆಂಕಿ ತೀವ್ರತೆಯನ್ನು ಪಡೆದುಕೊಂಡಿದೆ. ಇದರಿಂದ ಗಾಬರಿಗೊಳಗಾಗದ ಸಂಶೋಧಕರು ಅಗ್ನಿ ಶಾಮಕದಳ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಜತೆ ವಿದ್ಯಾರ್ಥಿ ನಿಲಯದ ಸಹಾಯಕ ಡೀನ್‌ ಡಾ. ಸುಷ್ಮಾ ಅವರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸಂಬಂಧ ತ್ವರಿತವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಹೇಳಿದರು.

ಇದರ ಬೆನ್ನಲ್ಲೇ ವಿದ್ಯಾರ್ಥಿ ನಿಲಯದಲ್ಲಿ ಇಲಿಗಳ ಕಾಟ ಹೆಚ್ಚಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಜತೆಗೆ ವಿದ್ಯಾರ್ಥಿ ನಿಲಯದ ಹಲವು ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

Tags: