ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ವಿದ್ಯಾರ್ಥಿ ನಿಲಯದಲ್ಲಿ ಭಾನುವಾರ (ಜುಲೈ.7) ಬೆಳ್ಳಂಬೆಳಿಗ್ಗೆಯೇ ಅಗ್ನಿ ಅವಘಡ ಸಂಭವಿಸಿದೆ.
ವಿದ್ಯಾರ್ಥಿ ನಿಲಯದ ಪವರ್ ಪ್ಯಾನೆಲ್‌ನಲ್ಲಿ ಇಂದು ಬೆಳಿಗ್ಗೆ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಪವರ್ ಪ್ಯಾನೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗ್ರೌಂಡ್ ಪ್ಲೋರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ನೋಡನೋಡುತ್ತಿದ್ದಂತೆ ಬೆಂಕಿ ತೀವ್ರತೆಯನ್ನು ಪಡೆದುಕೊಂಡಿದೆ. ಇದರಿಂದ ಗಾಬರಿಗೊಳಗಾಗದ ಸಂಶೋಧಕರು ಅಗ್ನಿ ಶಾಮಕದಳ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಜತೆ ವಿದ್ಯಾರ್ಥಿ ನಿಲಯದ ಸಹಾಯಕ ಡೀನ್ ಡಾ. ಸುಷ್ಮಾ ಅವರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸಂಬಂಧ ತ್ವರಿತವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಹೇಳಿದರು.
ಇದರ ಬೆನ್ನಲ್ಲೇ ವಿದ್ಯಾರ್ಥಿ ನಿಲಯದಲ್ಲಿ ಇಲಿಗಳ ಕಾಟ ಹೆಚ್ಚಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಜತೆಗೆ ವಿದ್ಯಾರ್ಥಿ ನಿಲಯದ ಹಲವು ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…