BREAKING NEWS

ಕಾವೇರಿ ವಿವಾದ : ಕರ್ನಾಟಕಕ್ಕೆ ಮತ್ತೆ ಹಿನ್ನಡೆ

ನವದೆಹಲಿ : ಕಾವೇರಿ ಜಲ ಹಂಚಿಕೆ ವಿವಾದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕಕ್ಕೆ ನಿರಾಸೆಯಾಗಿದ್ದು, ತೀರ್ಪು ತಮಿಳು ನಾಡು ಪರವಾಗಿ ಬಂದಿದೆ.

ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳು ನಾಡಿಗೆ ಬಿಡಬೇಕೆಂದು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ನೀಡಿದೆ.

ಈ ಮೂಲಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶವನ್ನು ಯಥಾವತ್ತಾಗಿ ಜಾರಿಗೆ ತರಬೇಕೆಂದು ಸೂಚಿಸಿದೆ.

ನ್ಯಾಯಾಲಯ ಇಂದು ಬೆಳಗ್ಗೆ 10.30ಕ್ಕೆ ವಿಚಾರಣೆ ಆರಂಭಿಸಿತು. ತಮಿಳುನಾಡು ಪರ ವಕೀಲರಾದ ಮುಕುಲ್​ ರೋಹಟಗಿ ಮತ್ತು ಕರ್ನಾಟಕದ ಪರ ವಕೀಲ ಶ್ಯಾಮ್​ ದಿವಾನ್​ ತಮ್ಮ ತಮ್ಮ ವಾದವನ್ನು ಮಂಡಿಸಿದರು.

ಪ್ರಸ್ತುತ ನೀರಿನ ಸಂಕಷ್ಟ ಇದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಆದರೆ, ಸಂಕಷ್ಟ ಸೂತ್ರವನ್ನು ಕರ್ನಾಟಕ ಪಾಲಿಸುತ್ತಿಲ್ಲ. ನಾವು ಬಹಳಷ್ಟು ಕಡಿಮೆ ನೀರನ್ನು ಪಡೆಯುತ್ತಿದ್ದೇವೆ ಎಂದು ತಮಿಳುನಾಡು ಪರ ವಕೀಲ ಮುಕುಲ್​ ರೋಹಟಗಿ ವಾದ ಮಂಡನೆ ಮಾಡಿದರು.

ಕರ್ನಾಟಕ ಪರ ವಾದ ಮಂಡಿಸಿದ ಶ್ಯಾಮ್​ ದಿವಾನ್​, ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶವನ್ನು ನಾವು ಪಾಲಿಸಿದ್ದೇವೆ ಎಂದರು.

ವಾದ-ವಿವಾದಗಳನ್ನು ಆಲಿಸಿದ ಬಳಿಕ ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ತಮಿಳುನಾಡಿಗೆ ನೀರು ಹರಿಸಲು ಆದೇಶ ಹೊರಡಿಸಿತು. ಇದರಿಂದ ಕರ್ನಾಟಕಕ್ಕೆ ಸುಪ್ರೀಂಕೋರ್ಟ್​ ನಲ್ಲೂ ಹಿನ್ನೆಡೆಯಾಗಿದೆ.

ತಮಿಳುನಾಡಿಗೆ ಸದ್ಯಕ್ಕೆ ಕರ್ನಾಟಕ 5,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸುವಂತೆ ಸುಪ್ರೀಂ ಕೋರ್ಟ್ ಪ್ರಾಧಿಕಾರಕ್ಕೆ ಸೂಚಿಸಿದೆ.

lokesh

Recent Posts

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…

2 hours ago

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

3 hours ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

3 hours ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

3 hours ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

4 hours ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

4 hours ago