ಬೆಂಗಳೂರು : ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶವನ್ನು ಎತ್ತಿ ಹಿಡಿದಿರುವ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಪ್ರಾಧಿಕಾರ ಹಾಗೂ ಸುಪ್ರಿಂಕೋರ್ಟ್ಗೆ ಮರು ಪರಿಶೀಲನೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹಿರಿಯ ನ್ಯಾಯಾಧೀಶರು, ನಿವೃತ್ತ ನ್ಯಾಯಮೂರ್ತಿಗಳ ಜೊತೆ ಸಭೆ ನಡೆಸಿದರು.
ಸಭೆಯಲ್ಲಿ ಕಾನೂನಿನ ಹೋರಾಟ ಮುಂದುವರೆಸುವಂತೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ಇಂದು ಅರ್ಜಿ ಸಲ್ಲಿಸಲು ನಿರ್ಧರಿಸಿದೆ. ಪ್ರಾಧಿಕಾರ ಹಾಗೂ ಸುಪ್ರಿಂಕೋರ್ಟ್ಗೆ ಮರು ಪರಿಶೀಲನೆ ಅರ್ಜಿ ಸಲ್ಲಿಸಿ, ನಿಮ್ಮ ಸಮಸ್ಯೆ ಮನವರಿಕೆ ಮಾಡಿಕೊಡಿ. ಪ್ರಾಧಿಕಾರದ ಆದೇಶ ಪಾಲನೆ ಅಸಾಧ್ಯ ಅಂತ ಹೇಳಿ. ಡ್ಯಾಂಗಳ ಮತ್ತು ಬೆಳೆಯ ಜಮೀನಿನ ಫೋಟೋ ಮತ್ತು ವಿಡಿಯೋಗಳನ್ನು ಕೋರ್ಟ್ಗೆ ಸಲ್ಲಿಸಿ ಎಂದು ಸಲಹೆ ನೀಡಿದರು.
ಅಲ್ಲದೆ ತಮಿಳುನಾಡಿನ ಡ್ಯಾಂ ನೀರು ಮತ್ತು ಅವರು ಎಷ್ಟು ಎಕರೆಯಲ್ಲಿ ಕೃಷಿ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ನ್ಯಾಯಾಲಯದ ಗಮನಕ್ಕೆ ತನ್ನಿ. ನದಿ ಹುಟ್ಟುವ ರಾಜ್ಯಕ್ಕೆ ಅಧಿಕಾರ ಜಾಸ್ತಿ. ಇದನ್ನು ಪ್ರತಿಪಾದಿಸಿ. ಕೋರ್ಟ್ನಲ್ಲಿ ಪ್ರಕರಣ ಇರುವಾಗ ಬಹಿರಂಗ ಹೇಳಿಕೆ ಕೊಡಬೇಡಿ. ಸಂಕಷ್ಟ ಸೂತ್ರಕ್ಕೆ ಒತ್ತಾಯಿಸಿ. ಮೇಕೆದಾಟು ಯೋಜನೆ ಬಗ್ಗೆ ಸುಪ್ರೀಂಕೋರ್ಟ್ಲ್ಲಿ ಒತ್ತಾಯ ಮಾಡಿ ಎಂದು ತಜ್ಞರು ಸಿಎಂಗೆ ಹೇಳಿದ್ದಾರೆ.
ಕಾವೇರಿ ವಿಚಾರದಲ್ಲಿ ನೀವು ರಾಜಕೀಯ ಫೈಟ್ ಮಾಡಿದರೇ ಜನರಿಗೆ ಉಳಿಗಾಲವಿಲ್ಲ. ಮೂರು ಪಕ್ಷಗಳ ನಾಯಕರು ಒಂದಾಗಿ ಹೋಗಿ. ವಿಪಕ್ಷಗಳು ಮತ್ತು ಸರ್ಕಾರದ ಕೆಲ ಸಚಿವರು ನೀರಾವರಿ ಅಂಕಿ ಅಂಶಗಳನ್ನು ಹೊರಗಡೆ ಹೇಳುವುದು ಬೇಡ ಎಂದು ನ್ಯಾಯಮೂರ್ತಿಗಳು ಹಾಗೂ ವಕೀಲರು ಸಲಹೆ ನೀಡಿದರು.
ನ್ಯಾಯಮೂರ್ತಿಗಳ ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಜೊತೆಗೆ ಮತ್ತು ಎಜಿ ಶಶಿಕಿರಣ್ ಶೆಟ್ಟಿ ಜೊತೆಗೆ ಪ್ರತ್ಯೇಕ ಸಭೆ ನಡೆಸಿದರು. ಸಭೆಯಲ್ಲಿ ಮರು ಪರಿಶೀಲನೆ ಅರ್ಜಿ ಸಲ್ಲಿಸಲು ನಿರ್ಧರಿಸಲಾಯಿತು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…