ನವದೆಹಲಿ : ರಾಜಕೀಯ ಭಿನ್ನಾಭಿಪ್ರಾಯಗಳು ಇದ್ದರೂ ಕಾವೇರಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ರಾಜ್ಯದ ಪರ ನಿಲ್ಲುವುದಾಗಿ ಸರ್ವಪಕ್ಷಗಳ ಸಂಸದರು ಮಾತುಕೊಟಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
ದೆಹಲಿಯ ತಾಜ್ ಹೋಟೆಲ್‍ನಲ್ಲಿ ಸರ್ವಪಕ್ಷ ಸಂಸದರ ಸಭೆಯ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು ಕಾವೇರಿ ವಿಚಾರವಾಗಿ ಸಂಸತ್ ಅವೇಶನದಲ್ಲಿ ದನಿ ಎತ್ತುವುದಾಗಿ ಎಲ್ಲಾ ಸಂಸದರು ಭರವಸೆ ನೀಡಿದ್ದಾರೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರನ್ನು ಮುಖ್ಯಮಂತ್ರಿಗಳು ಹಾಗೂ ನಾನು ಭೇಟಿಯಾಗಿ ಚರ್ಚೆ ನಡೆಸಿದ್ದೇವೆ. ಅವರು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಪರಿಸ್ಥಿತಿ ವಿವರಿಸುವುದಾಗಿ ಭರವಸೆ ನೀಡಿದ್ದಾರೆ.
ಮಳೆ ಕಡಿಮೆ ಬಿದ್ದಾಗ ನೀರನ್ನು ಎಷ್ಟು ಹಂಚಿಕೆ ಮಾಡಬೇಕು ಎನ್ನುವ ಬಗ್ಗೆ ಕಾವೇರಿ ನೀರು ನಿರ್ವಹಣಾ ಸಮಿತಿ ಸರಿಯಾದ ಸೂತ್ರ ಹಂಚಿಕೆ ಮಾಡಿಲ್ಲ. 5 ಸಾವಿರ ಕ್ಯೂಸೆಕ್ಸ್ ನೀರು ಹರಿಸಿ ಎಂದು ಹೇಳಿರುವುದು ಅವೈಜ್ಞಾನಿಕ ಎಂದು ಹೇಳಿದರು.
ರಾಜ್ಯದಲ್ಲಿ ಕಾವೇರಿ ನೀರಿನ ಲಭ್ಯತೆ ಅತ್ಯಂತ ಕಡಿಮೆ ಇದ್ದು, ಇದನ್ನು ಸುಪ್ರೀಂ ಕೋರ್ಟಿಗೆ ಮನವರಿಕೆ ಮಾಡುತ್ತೇವೆ. ಅಲ್ಲಿ ನಮಗೆ ನ್ಯಾಯ ಸಿಗುವ ಭರವೆಯಿದೆ. ಕಳೆದ 120 ವರ್ಷಗಳಲ್ಲಿ ಅತ್ಯಂತ ಕಷ್ಟದ ಸಂದರ್ಭವನ್ನು ಕರ್ನಾಟಕ ಎದುರಿಸುತ್ತಿದೆ. ಕಾವೇರಿ ನೀರು ನಿರ್ವಹಣಾ ಪ್ರಾಕಾರ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆಗೆ ಆದೇಶ ನೀಡಿದ್ದು ಇಷ್ಟೆಲ್ಲಾ ಸಂಕಷ್ಟಗಳಿಗೆ ದಾರಿ ಮಾಡಿಕೊಟ್ಟಿದೆ.
ರಾಜ್ಯದ ನೆಲ- ಜಲದ ಸಂರಕ್ಷಣೆ ಸದಾ ಬೆನ್ನೆಲುಬಾಗಿ ನಾವು ನಿಲ್ಲುತ್ತೇವೆ ಎಂದು ಸಭೆಗೆ ಬಂದಿದ್ದಂತಹ ಬಿಜೆಪಿ, ಕಾಂಗ್ರೆಸ್, ಜನತದಳದ ಮತ್ತು ಪಕ್ಷೇತರ ಸಂಸದರು ಹಾಗೂ ರಾಜ್ಯಸಭಾ ಸದಸ್ಯರಿಗೆ ಕರ್ನಾಟಕ ಸರ್ಕಾರ ಅಭಾರಿಯಾಗಿರುತ್ತದೆ ಎಂದು ಇದೇ ವೇಳೆ ಧನ್ಯವಾದಗಳನ್ನು ತಿಳಿಸಿದರು.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…