BREAKING NEWS

ಮಂಡ್ಯದಲ್ಲಿ ಕಾವೇರಿಗಾಗಿ ಕಾವೇರಿದ ಪ್ರತಿಭಟನೆ

ಮಂಡ್ಯ : ಕರ್ನಾಟಕ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಹೆದ್ದಾರಿ ಬಂದ್ ಬದಲಾಗಿ ಮಂಡ್ಯ  ನಗರದ ಜೆಸಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಜೆಸಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಚೆಂಡು ಹೂವು ಮುಡಿದು, ಹುರುಳಿ ಕಾಳು ಅಳೆಯುವುದರ ಮೂಲಕ ಕರ್ನಾಟಕ ಸರ್ಕಾರ ಮಂಡ್ಯ ಜಿಲ್ಲೆಯ ರೈತರಿಗೆ ಹುರಳಿ ತಿನ್ನಲು ಹೇಳುತ್ತಿದೆ ಹಾಗೂ ಕಿವಿಗೆ ಹೂವು ಇಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಕಾರ್ಯಕರ್ತರು ಮಂಡ್ಯ ಮೈಸೂರು ಹೆದ್ದಾರಿಗೆ ಇಳಿಯದಂತೆ ಜಿಲ್ಲಾ ಪೊಲೀಸ್ ಇಲಾಖೆಯು ಡಿಎಸ್ಪಿ ಶಿವಮೂರ್ತಿ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸತ್ತಲಾಗಿತ್ತು. ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳದಲ್ಲಿ ಸುತ್ತಲೂ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು.

ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿಪಿ ಉಮೇಶ್ ಬೆಂಗಳೂರು ಸಂಸದ ಜಿಸಿ ಮೋಹನ್ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ ನಾರಾಯಣ ಮುಖಂಡರಾದ ಡಾ. ಸಿದ್ದರಾಮಯ್ಯ ಕೆ ಎಸ್ ನಂಜುಂಡೇಗೌಡ ಎಸ್ ಸಚ್ಚಿದಾನಂದ ಸಿಟಿ ಮಂಜು ಎನ್ ಎಸ್ ಇಂದ್ರೇಶ್ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

lokesh

Recent Posts

ಸಿಎಂ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ: ಆರ್.‌ಅಶೋಕ್‌

ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

15 mins ago

ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು…

24 mins ago

ಪಾಕಿಸ್ತಾನದಲ್ಲಿ ಮಜೂದ್‌ ಅಜರ್‌ ಸಹೋದರ ಅನುಮಾನಾಸ್ಪದ ಸಾವು

ಇಸ್ಲಾಮಾಬಾದ್:‌ ಭಾರತದಲ್ಲಿ ಈ ಹಿಂದೆ ನಡೆದಿದ್ದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ…

44 mins ago

ಮಾಲ್ದಾರೆ ಅರಣ್ಯ ಮಾರ್ಗದಲ್ಲಿ ಪ್ರವಾಸಿಗರಿಗೆ ಹುಲಿ ದರ್ಶನ

ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…

1 hour ago

ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ: ಎಸ್.ಟಿ.ಸೋಮಶೇಖರ್‌

ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

2 hours ago

ಬಿಹಾರದ ನಳಂದಾ ದೇಗುಲದಲ್ಲಿ ಕಾಲ್ತುಳಿತ: 8 ಮಂದಿ ಸಾವು

ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…

3 hours ago