ನವದೆಹಲಿ : ಕಾವೇರಿ ನದಿ ನೀರು ಹಂಚಿಕೆ ವಿವಾದ ಪ್ರಕರಣದ ವಿಚಾರಣೆ ನಡೆಸಲು ಪ್ರತ್ಯೇಕ ಪೀಠ ರಚಿಸಲು ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿದೆ. ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದ ಬೆನ್ನಿಗೇ ಕರ್ನಾಟಕ ಕೂಡ ಅರ್ಜಿ ಸಲ್ಲಿಸಿದ ನಂತರ ಈ ಬೆಳವಣಿಗೆ ನಡೆದಿದೆ.
ನೆರೆಯ ತಮಿಳುನಾಡು ರಾಜ್ಯಕ್ಕೆ ಕಾವೇರಿ ನದಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿಗೆ ಅಪೀಲು ಸಲ್ಲಿಸುವಂತೆ ರಾಜ್ಯದ ಅಡ್ವಕೇಟ್ ಜನರಲ್ ಅವರಿಗೆ ಕರ್ನಾಟಕ ಸಚಿವ ಸಂಪುಟ ಶನಿವಾರ ಸೂಚಿಸಿತ್ತು. ಕಳೆದ ವಾರ ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿ ರಾಜ್ಯದ ಬೆಳೆಗಳಿಗೆ ನೀರುಣಿಸಲು ಸಹಾಯವಾಗಲು ಪ್ರತಿ ದಿನ 24,000 ಕ್ಯೂಸೆಕ್ಸ್ ನೀರು ಬಿಡುಗಡೆಗೊಳಿಸುವಂತೆ ಕರ್ನಾಟಕಕ್ಕೆ ಸೂಚಿಸಬೇಕೆಂದು ಕೋರಿತ್ತು.
ರಾಜ್ಯದ ಅಗತ್ಯತೆಗಳನ್ನು, ಅಂದರೆ ಕುಡಿಯುವ ಉದ್ದೇಶಕ್ಕೆ ಮತ್ತು ಕಾವೇರಿ ಸುತ್ತಲಿನ ಪ್ರದೇಶದಲ್ಲಿನ ಬೆಳೆಗಳಿಗೆ ನೀರುಣಿಸುವ ಅಗತ್ಯತೆಗಳನ್ನು ಪರಿಗಣಿಸಿ ನಂತರ ತಮಿಳುನಾಡಿಗೆ ನೀರು ಪೂರೈಸುವುದಾಗಿ ಕರ್ನಾಟಕ ಹೇಳಿದೆಯಲ್ಲದೆ ರಾಜ್ಯದಲ್ಲಿ ಮಳೆ ಕೊರತೆಯನ್ನೂ ಉಲ್ಲೇಖಿಸಿದೆ.
ಈ ಹಿನ್ನೆಲೆಯಲ್ಲಿ ವಿವಾದ ಸಂಬಂಧ ವಿಚಾರಣೆ ನಡೆಸಲು ಪೀಠ ರಚಿಸಲು ಸುಪ್ರೀಂ ಕೋರ್ಟ್ ಇಂದು ಒಪ್ಪಿದೆ.
ಜಲ ಸಂಪನ್ಮೂಲ ಸಚಿವಾಲಯವನ್ನು ಹೊಂದಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಳೆದ ವಾರ ಈ ವಿವಾದ ಕುರಿತು ಪ್ರತಿಕ್ರಿಯಿಸಿ, ಕರ್ನಾಟಕವು ತಮಿಳುನಾಡಿಗೆ 10,000 ಟಿಎಂಸಿ ಅಡಿ ನೀರು ಬಿಡುಗಡೆಗೊಳಿಸುವುದಾಗಿ ತಿಳಿಸಿದ್ದರು.
ಆದರೆ ತನ್ನದೇ ಅಗತ್ಯತೆಗಳಿಗೆ ರಾಜ್ಯಕ್ಕೆ ನೀರಿನ ಕೊರತೆಯಿದೆ ಎಂದೂ ಅವರು ತಿಳಿಸಿದ್ದರು.
ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 10,000 ಕ್ಯೂಸೆಕ್ಸ್ ನೀರು ಬಿಡುಗಡೆಗೊಳಿಸಬೇಕೆಂಬ ತನ್ನ ಆದೇಶವನ್ನು ಪರಿಶೀಲಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಕರ್ನಾಟಕ ಸರ್ಕಾರ ಪತ್ರ ಬರೆದಿರುವ ಕುರಿತು ಶಿವಕುಮಾರ್ ಕಳೆದ ಶುಕ್ರವಾರ ಮಾಹಿತಿ ನೀಡಿದ್ದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…