BREAKING NEWS

ಕಾವೇರಿ ನದಿ ನೀರು ಹಂಚಿಕೆ ವಿವಾದ: ಪ್ರತ್ಯೇಕ ಪೀಠ ರಚನೆಗೆ ಒಪ್ಪಿದ ಸುಪ್ರೀಂ ಕೋರ್ಟ್‌

ನವದೆಹಲಿ : ಕಾವೇರಿ ನದಿ ನೀರು ಹಂಚಿಕೆ ವಿವಾದ ಪ್ರಕರಣದ ವಿಚಾರಣೆ ನಡೆಸಲು ಪ್ರತ್ಯೇಕ ಪೀಠ ರಚಿಸಲು ಸುಪ್ರೀಂ ಕೋರ್ಟ್‌ ಸೋಮವಾರ ಒಪ್ಪಿದೆ. ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದ ಬೆನ್ನಿಗೇ ಕರ್ನಾಟಕ ಕೂಡ ಅರ್ಜಿ ಸಲ್ಲಿಸಿದ ನಂತರ ಈ ಬೆಳವಣಿಗೆ ನಡೆದಿದೆ.

ನೆರೆಯ ತಮಿಳುನಾಡು ರಾಜ್ಯಕ್ಕೆ ಕಾವೇರಿ ನದಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿಗೆ ಅಪೀಲು ಸಲ್ಲಿಸುವಂತೆ ರಾಜ್ಯದ ಅಡ್ವಕೇಟ್‌ ಜನರಲ್‌ ಅವರಿಗೆ ಕರ್ನಾಟಕ ಸಚಿವ ಸಂಪುಟ ಶನಿವಾರ ಸೂಚಿಸಿತ್ತು. ಕಳೆದ ವಾರ ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿ ರಾಜ್ಯದ ಬೆಳೆಗಳಿಗೆ ನೀರುಣಿಸಲು ಸಹಾಯವಾಗಲು ಪ್ರತಿ ದಿನ 24,000 ಕ್ಯೂಸೆಕ್ಸ್‌ ನೀರು ಬಿಡುಗಡೆಗೊಳಿಸುವಂತೆ ಕರ್ನಾಟಕಕ್ಕೆ ಸೂಚಿಸಬೇಕೆಂದು ಕೋರಿತ್ತು.

ರಾಜ್ಯದ ಅಗತ್ಯತೆಗಳನ್ನು, ಅಂದರೆ ಕುಡಿಯುವ ಉದ್ದೇಶಕ್ಕೆ ಮತ್ತು ಕಾವೇರಿ ಸುತ್ತಲಿನ ಪ್ರದೇಶದಲ್ಲಿನ ಬೆಳೆಗಳಿಗೆ ನೀರುಣಿಸುವ ಅಗತ್ಯತೆಗಳನ್ನು ಪರಿಗಣಿಸಿ ನಂತರ ತಮಿಳುನಾಡಿಗೆ ನೀರು ಪೂರೈಸುವುದಾಗಿ ಕರ್ನಾಟಕ ಹೇಳಿದೆಯಲ್ಲದೆ ರಾಜ್ಯದಲ್ಲಿ ಮಳೆ ಕೊರತೆಯನ್ನೂ ಉಲ್ಲೇಖಿಸಿದೆ.

ಈ ಹಿನ್ನೆಲೆಯಲ್ಲಿ ವಿವಾದ ಸಂಬಂಧ ವಿಚಾರಣೆ ನಡೆಸಲು ಪೀಠ ರಚಿಸಲು ಸುಪ್ರೀಂ ಕೋರ್ಟ್‌ ಇಂದು ಒಪ್ಪಿದೆ.

ಜಲ ಸಂಪನ್ಮೂಲ ಸಚಿವಾಲಯವನ್ನು ಹೊಂದಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕಳೆದ ವಾರ ಈ ವಿವಾದ ಕುರಿತು ಪ್ರತಿಕ್ರಿಯಿಸಿ, ಕರ್ನಾಟಕವು ತಮಿಳುನಾಡಿಗೆ 10,000 ಟಿಎಂಸಿ ಅಡಿ ನೀರು ಬಿಡುಗಡೆಗೊಳಿಸುವುದಾಗಿ ತಿಳಿಸಿದ್ದರು.

ಆದರೆ ತನ್ನದೇ ಅಗತ್ಯತೆಗಳಿಗೆ ರಾಜ್ಯಕ್ಕೆ ನೀರಿನ ಕೊರತೆಯಿದೆ ಎಂದೂ ಅವರು ತಿಳಿಸಿದ್ದರು.

ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 10,000 ಕ್ಯೂಸೆಕ್ಸ್‌ ನೀರು ಬಿಡುಗಡೆಗೊಳಿಸಬೇಕೆಂಬ ತನ್ನ ಆದೇಶವನ್ನು ಪರಿಶೀಲಿಸುವಂತೆ ಕಾವೇರಿ ನದಿ ನೀರು‌ ನಿರ್ವಹಣಾ ಪ್ರಾಧಿಕಾರಕ್ಕೆ ಕರ್ನಾಟಕ ಸರ್ಕಾರ ಪತ್ರ ಬರೆದಿರುವ ಕುರಿತು ಶಿವಕುಮಾರ್‌ ಕಳೆದ ಶುಕ್ರವಾರ ಮಾಹಿತಿ ನೀಡಿದ್ದರು.

andolanait

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

14 mins ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

16 mins ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

18 mins ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

24 mins ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

39 mins ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

51 mins ago