Mysore
20
broken clouds

Social Media

ಬುಧವಾರ, 13 ನವೆಂಬರ್ 2024
Light
Dark

ಕಾವೇರಿ ನದಿನೀರು ವಿವಾದ: ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದ ಸುಪ್ರೀಂಕೋರ್ಟ್​​

ನವದೆಹಲಿ : ಉಭಯ ರಾಜ್ಯಗಳು ತಮ್ಮ ಜಲಾಶಯಗಳ ವಾಸ್ತವ ಸ್ಥಿತಿಯನ್ನು ಲಿಖಿತ ಮೂಲಕ ಸಲ್ಲಿಸಬೇಕೆಂದು ಸೂಚಿಸಿರುವ ಸುಪ್ರೀಂಕೋರ್ಟ್, ಬೆಳೆದು ನಿಂತಿರುವ ಬೆಳೆಗಳಿಗೆ ಕರ್ನಾಟಕದಿಂದ ಪ್ರತಿದಿನ 24,000 ಕ್ಯುಸೆಕ್ ಕಾವೇರಿ ನೀರು ಬಿಡುವಂತೆ ಕೋರಿ ತಮಿಳುನಾಡು ಸರಕಾರ ಸಲ್ಲಿಸಿರುವ ಮನವಿಗೆ ಯಾವುದೇ ಆದೇಶ ನೀಡಲು ನಿರಾಕರಿಸಿದೆ.

ಸೆಪ್ಟೆಂಬರ್ 1ರ ಮಧ್ಯಂತರ ಅವಧಿಯೊಳಗೆ ಕಾವೇರಿ ನದಿ ಪಾತ್ರದ ರಾಜ್ಯಗಳ ಸಭೆಯನ್ನು ನಡೆಸಬೇಕು ಎಂದು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸೂಚನೆ ನೀಡಿತು.

ಸೋಮವಾರ ಪ್ರಾಧಿಕಾರದ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ತಿಳಿಸಿದ ನಂತರ ನ್ಯಾಯಮೂರ್ತಿ ಬಿಆರ್ ಗವಾಯಿಪಿ ಎಸ್.ನರಸಿಂಹ, ಮತ್ತು ಪ್ರಶಾಂತ್ ಮಿಶ್ರಾ ಅವರನ್ನೊಳಗೊಂಡ ನೇತೃತ್ವದ ತ್ರಿಸದಸ್ಯ ಪೀಠವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ (ಸಿಡಬ್ಲ್ಯುಎಂಎ) ಕರ್ನಾಟಕ ಬಿಡುಗಡೆ ಮಾಡಿದ ನೀರಿನ ಪ್ರಮಾಣದ ಬಗ್ಗೆ ವರದಿ ಕೇಳಿ, ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 1 ಕ್ಕೆ ಮುಂದೂಡಿದೆ.

ನಾವು ಈ ವಿಷಯದಲ್ಲಿ ಯಾವುದೇ ಪರಿಣತಿಯನ್ನು ಹೊಂದಿಲ್ಲ. ಮುಂದಿನ ಹದಿನೈದು ದಿನಗಳ ಕಾಲ ನೀರು ಹರಿಸುವುದನ್ನು ನಿರ್ಧರಿಸಲು ಸೋಮವಾರ ಪ್ರಾಧಿಕಾರ ಸಭೆ ನಡೆಸುತ್ತಿದೆ ಎಂದು ಎಎಸ್‍ಜಿ ಪೀಠದ ಗಮನಕ್ಕೆ ತಂದರು.

ನೀರು ಬಿಡಲು ನೀಡಿರುವ ನಿರ್ದೇಶನಗಳನ್ನು ಪಾಲಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು (ಸಿಡಬ್ಲ್ಯುಎಂಎ) ತನ್ನ ವರದಿಯನ್ನು ಸಲ್ಲಿಸುವುದು ಸೂಕ್ತವೆಂದು ನಾವು ಕಂಡುಕೊಂಡಿದ್ದೇವೆ ಪೀಠ ಹೇಳಿತು.

ಉಭಯ ರಾಜ್ಯಗಳ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಸ್ಥಿತಿಗತಿ ಕುರಿತ ವಾಸ್ತವ ವರದಿಯನ್ನು ನೀಡಬೇಕೆಂದು ಸೂಚನೆ ನೀಡಿ,ನೀರು ಹಂಚಿಕೆ ವಿಷಯದಲ್ಲಿ ನಾವು ಕಾನೂನು ತಜ್ಞರಲ್ಲ. ಇಂತಹ ಸಂದರ್ಭದಲ್ಲಿ ನಾವು ಮಧ್ಯಂತರ ಆದೇಶ ಹೊರಡಿಸಲು ಹೇಗೆ ಸಾಧ್ಯ ಎಂದು ಪೀಠ ತಮಿಳುನಾಡು ಸರ್ಕಾರದ ಪರ ವಕೀಲ ವೈದ್ಯನಾಥ್‍ರನ್ನು ಪ್ರಶ್ನೆ ಮಾಡಿತು.

ಇದಕ್ಕೆ ಪ್ರತಿಕ್ರಿಯಿಸಿದ ತಮಿಳುನಾಡಿನ ಸರ್ಕಾರದ ವಕೀಲರು ಪ್ರಸ್ತುತ ತಮಿಳುನಾಡಿನಲ್ಲಿ ಕುರುವೈ ಬೆಳೆ ಬೆಳೆದು ನಿಂತಿದೆ. ತಕ್ಷಣವೇ ಕಾವೇರಿ ಜಲಾನಯನ ತೀರ ಪ್ರದೇಶಗಳಿಂದ ನೀರು ಹರಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು.

ಇದನ್ನು ಒಪ್ಪದ ನ್ಯಾಯಪೀಠ ನೀರು ಹಂಚಿಕೆ ಕುರಿತಂತೆ ನ್ಯಾಯಾಲಯ ತತ್‍ಕ್ಷಣವೇ ಯಾವುದೇ ಮಧ್ಯಂತರ ತೀರ್ಪು ನೀಡಲು ಸಾಧ್ಯವಿಲ್ಲ. ನೀವು ಕಾವೇರಿ ನದಿ ನೀರು ನಿರ್ವಹಣಾ ಪ್ರಾಕಾರದ ಮುಂದೆ ಏಕೆ ಹೋಗಬಾರದು ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿ, ಕಾವೇರಿ ನದಿ ನೀರು ಹಂಚಿಕೆ ಸಂಬಂಧ ನಿರ್ವಹಣಾ ಪ್ರಾಕಾರದ ಸಭೆ ಕರೆಯುವಂತೆ ಸೂಚಿಸಿ ಅರ್ಜಿ ವಿಚಾರಣೆಯನ್ನು ಸೂಚಿಸಿತು.

ಪ್ರಾಧಿಕಾರದಲ್ಲಿ ತಜ್ಞರಿದ್ದಾರೆ. ನಾವು ಮೊದಲೇ ಹೇಳಿದಂತೆ ತಜ್ಞರಲ್ಲ. ಜಲಾಶಯಗಳಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬುದನ್ನು ನೋಡಿಕೊಂಡು ತೀರ್ಮಾನಿಸಬೇಕಾಗುತ್ತದೆ. ಇದನ್ನು ಪ್ರಾಕಾರವೇ ಮಾಡಬೇಕು. ಏಕಾಏಕಿ ಮಧ್ಯಂತರ ವರದಿಯನ್ನು ನೀಡಲು ಸಾಧ್ಯವೇ ಇಲ್ಲ. ನಾವು ತನಿಖೆ ಮಾಡದೇ ಆದೇಶ ಕೊಡಲು ಹೇಗೆ ಸಾಧ್ಯ ಎಂದು ತಮಿಳುನಾಡು ಸರ್ಕಾರದ ಪರ ವಕೀಲರನ್ನು ನ್ಯಾಯಾಧೀಶರು ಪ್ರಶ್ನೆ ಮಾಡಿದರು.

ಕರ್ನಾಟಕದ ಪರ ವಾದ ಮಂಡಿಸಿದ ಹಿರಿಯ ವಕೀಲ ಶ್ಯಾಂ ದಿವಾನ್ ಅವರು ಪ್ರಸ್ತುತ ಕರ್ನಾಟಕದಲ್ಲಿ ವಾಡಿಕೆಗಿಂತ ಈ ಬಾರಿ ಕಡಿಮೆ ಮಳೆಯಾಗಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕನಿಷ್ಠ ಪ್ರಮಾಣದಲ್ಲಿ ಸಂಗ್ರಹವಾಗಿದೆ. ನಮ್ಮ ಸಮಸ್ಯೆಗಳನ್ನು ಹೇಳಲೆಂದೇ ಕಾವೇರಿ ನದಿ ನಿರ್ವಹಣಾ ಪ್ರಾಕಾರದ ಸಭೆಯನ್ನು ಕರೆಯಲಾಗಿತ್ತು. ಆದರೆ ತಮಿಳುನಾಡಿನ ಪ್ರತಿನಿಗಳು ಸಮಸ್ಯೆಗಳನ್ನು ಹೇಳುವಾಗ ಸಭೆಯಿಂದ ಅರ್ಧಕ್ಕೆ ಎದ್ದು ಹೋಗಿದ್ದಾರೆ ಎಂದು ನ್ಯಾಯಾಧೀಶರ ಗಮನಕ್ಕೆ ತಂದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹಿರಿಯ ವಕೀಲ ಮುಕುಲ್ ರೊಹ್ಟಗಿ ಪ್ರತೀ ವರ್ಷ ತಮಿಳುನಾಡಿಗೆ ಕಾವೇರಿ ಜಲಾನಯನದಿಂದ 40 ಟಿಎಂಸಿ ನೀರು ಹರಿಸಬೇಕು. ಪ್ರಾಕಾರದ ಆದೇಶದಂತೆ ಪ್ರತೀ ದಿನ 10 ರಿಂದ 15 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸಬೇಕು. ಇದು ಮುಂದಿನ 20 ದಿನಗಳವರೆಗೂ ಮುಂದುವರೆಯಬೇಕು. ಇಲ್ಲದಿದ್ದರೆ ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಹೇಳಿದರು.

ನಿಂತಿರುವ ಬೆಳೆಗಳಿಗೆ ಪ್ರತಿದಿನ 24,000 ಕ್ಯೂಸೆಕ್ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್‍ಗೆ ನಿರ್ದೇಶನ ಕೋರಿ ತಮಿಳುನಾಡು ಮಾಡಿದ ಮನವಿಯನ್ನು ಕರ್ನಾಟಕ ಪರ ವಕೀಲ ಶ್ಯಾ ದೀವಾನ್ “ಸಂಪೂರ್ಣ ತಪ್ಪು ಕಲ್ಪನೆ” ಎಂದು ಹೇಳಿದರು.

ಕಾವೇರಿ ನದಿ ನೀರಿಗಾಗಿ ತಮಿಳುನಾಡು ಸರ್ಕಾರದ ಅರ್ಜಿ ವಿಚಾರಣೆ ವೇಳೆ ಸಭೆ ಕರೆಯುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನಿರ್ವಹಣಾ ಪ್ರಾಧಿಕಾರವು ಸೋಮವಾರವೇ (ಆ.28) ದೆಹಲಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದು, ಸಭೆಯಲ್ಲಿ ಕರ್ನಾಟಕ, ತಮಿಳುನಾಡು ಸರ್ಕಾರದ ಅಭಿಪ್ರಾಯ ಸಂಗ್ರಹಿಸಲಿದೆ.

ಕರ್ನಾಟಕದ ಅಫಿಡೆವಿಟ್‍ನಲ್ಲಿ ಏನಿದೆ?
ಈ ಬಾರಿ ಕಾವೇರಿ ಕೊಳ್ಳದಲ್ಲಿ ಶೇ.42ರಷ್ಟು ಮಳೆ ಕೊರತೆಯಿದೆ. ಕರ್ನಾಟಕ ಸಿಡಬ್ಲ್ಯುಎಂಎ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದೆ. ಸಾಮಾನ್ಯ ವರ್ಷದಂತೆ ನೀರು ಹರಿಸಲು ತಮಿಳುನಾಡು ಕೇಳುತ್ತಿದೆ. ತಮಿಳುನಾಡು 36.76 ಟಿಎಂಸಿ ನೀರು ಹರಿಸುವಂತೆ ಕೇಳುತ್ತಿದೆ. ಆದ್ರೆ, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಕರ್ನಾಟಕದ ಜಲಾಶಯಗಳಲ್ಲಿ 42% ಕಡಿಮೆ ನೀರು ಸಂಗ್ರಹವಾಗಿದೆ.

ಕಾವೇರಿ ಜಲಾನಯನದಲ್ಲಿರುವ ನೀರು ಕರ್ನಾಟಕಕ್ಕೆ ಸಾಕಾಗುವುದಿಲ್ಲ. ಬೆಳೆ ಮತ್ತು ಕುಡಿಯುವ ನೀರಿಗೆ ಕೊರತೆಯಾಗಲಿದೆ. ಬೆಂಗಳೂರಿನಂತಹ ಮಹಾ ನಗರಕ್ಕೂ ನೀರಿನ ಕೊರತೆಯಾಗಲಿದೆ. ಅದಾಗ್ಯೂ ಕರ್ನಾಟಕ ತಮಿಳುನಾಡಿಗೆ ನೀರು ಹರಿಸಿ ಅWಒಂ ಆದೇಶವನ್ನು ಕರ್ನಾಟಕ ಪಾಲಿಸಿದೆ ಎಂದು ಅಫಿಡೆವಿಟ್?ನಲ್ಲಿ ಉಲ್ಲೇಖಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ