Mysore
25
haze

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ಡಿಕೆಶಿ ವಿರುದ್ಧದ ಸಿಬಿಐ ತನಿಖೆ ವಾಪಸ್‌ : ಹೈ ಕೋರ್ಟ್‌ ಮೆಟ್ಟಿಲೇರಿದ ಯತ್ನಾಳ್

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯನ್ನು ವಾಪಸ್‌ ಪಡೆಯಲು ನಿರ್ಧರಿಸಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೈ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ ನಡೆಯನ್ನು ಕಂಡಿಸಿರುವ ಯತ್ನಾಳ್‌ ಹೈ ಕೋರ್ಟ್‌ ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಹೈ ಕೋರ್ಟ್‌ ನ ವಿಚಾರಣೆಯನ್ನು ನಿಷ್ಪಲಗೊಳಿಸಲು ಯತ್ನಿಸಲಾಗುತ್ತಿದೆ. ಸಿಬಿಐ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ. ಈ ಹಂತದಲ್ಲಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಕಾನೂನು ಬಾಹೀರವಾಗಿದೆ. ಇದು ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದೆ. ಈ ಮೂಲಕ ಸರ್ಕಾರ ನ್ಯಾಯಾಂಗದ ನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುವ ಯತ್ನ ನಡೆಸಿದೆ. ಹಾಗಾಗಿ ಸರ್ಕಾರದ ಈ ರೀತಿಯ ಕ್ರಮಕ್ಕೆ ಸೀಮಿತವಾಗಿ ಕೋರ್ಟ್‌ ತಮ್ಮ ವಾದವನ್ನು ಆಲಿಸಬೇಕು ಎಂದು ಯತ್ನಾಳ್‌ ಮನವಿ ಮಾಡಿಕೊಂಡಿದ್ದಾರೆ.

ಡಿಕೆ ಶಿವಕುಮಾರ್‌ ಅವರ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಇದರ ಬೆನ್ನಲ್ಲೇ ವಿಪಕ್ಷಗಳು ತೀವ್ರ ಆಕ್ರೋಶ ಹೊರ ಹಾಕಿದ್ದವು. ಬಿಜೆಪಿ ನಾಯಕ ಈಶ್ವರಪ್ಪ ಅವರು ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿದ್ದರು. ಶಿವಕುಮಾರ್‌ ಅವರ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಚಿವ ಸಂಪುಟ ಹಿಂತೆಗೆದುಕೊಂಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿರುವ ಅವಮಾನ. ಕಳ್ಳ ಯಾವತ್ತಿದ್ದರೂ ಕಳ್ಳನೇ. 135 ಸೀಟ್‌ ಬಂದಿದೆ ಎಂದು ಮಾಡಬಾರದ ಕೆಲಸವನ್ನೆಲ್ಲಾ ಮಾಡುತ್ತಿದ್ದಾರೆ. 23 ಕೋಟಿ ಇದ್ದ ಡಿಕೆ ಶಿವಕುಮಾರ್‌ ಆದಾಯ ದಿಢೀರನೆ 163 ಕೋಟಿಗೆ ಏರಿಕೆಯಾಗಿದೆ. ಬಿಎಸ್ ವೈ ಸಿಎಂ ಆಗಿದ್ದಾಗ ಪ್ರಕರಣವನ್ನು ಸಿಬಿಐ ಗೆ ವಹಿಸಲಾಗಿತ್ತು. ಆಗ ಡಿಕೆಶಿ ನ್ಯಾಯಾಲಯಕ್ಕೆ ಹೋದರೂ ಕೂಡ ಪ್ರಕರಣ ತಿರಸ್ಕಾರವಾಗಿತ್ತು. ಈಗ ಪ್ರಕರಣ ಅಂತಿಮ ಹಂತಕ್ಕೆ ಬಂದಿದೆ. ಇಂತಹ ಸಂದ್ಭದಲ್ಲಿ ಈ ರೀತಿ ಮಾಡುವುದು ಸರಿ ಅಲ್ಲ ಕೇಡಿ ಸಿದ್ದು ಸಚಿವ ಸಂಪುಟ ಕಳ್ಳರ ಗುಂಪಾಗಿದೆ. ಕೇಡಿ ಸಿದ್ದು ಅವರ ದರೋಡೆಕೋರರ ಗುಂಪು ದುರುಪಯೋಗಪಡಿಸಿಕೊಂಡಿದೆ ಎಂದು ಆಕ್ರೋಶ ಹೊರ ಹಾಕಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ