ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿ ನೂರು ದಿನಗಳಾಗಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತೋಷ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ “100 ದಿನಗಳು” ಪೂರೈಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಡಿನ ಮತದಾರರು ನಮ್ಮ ಮೇಲೆ ನಂಬಿಕೆ ಮತ್ತು ಭರವಸೆಯನ್ನಿಟ್ಟು 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಪೂರ್ಣ ಬಹುಮತದ ಸುಭದ್ರ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜನರು ನೀಡಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಅವರ ನಿರೀಕ್ಷೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
ಗ್ಯಾರಂಟಿ ಮತ್ತು ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಜೊತೆಗೆ ಬುದ್ಧ, ಬಸವ, ಅಂಬೇಡ್ಕರ್, ಕುವೆಂಪು, ಕನಕದಾಸರು, ನಾರಾಯಣ ಗುರು ಮುಂತಾದ ದಾರ್ಶನಿಕರು ತೋರಿದ ಸಮಾನತೆಯ ಹಾದಿಯಲ್ಲಿ ನಾಡನ್ನು ಮುನ್ನಡಿಸಿಕೊಂಡು ಹೋಗುತ್ತಿದ್ದೇವೆ. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸರ್ಕಾರದ ಕಾರ್ಯಕ್ರಮಗಳ ಮೂಲಕ ತಲುಪಬೇಕೆಂಬ ಆಶಯದೊಂದಿಗೆ ಆರಂಭಿಸಿರುವ ನಮ್ಮ ಪಯಣಕ್ಕಿಂದು ಶತಕ ಸಂಭ್ರಮ. ಈ ವಿಶೇಷ ಸಂದರ್ಭದಲ್ಲಿ ನಮ್ಮೊಂದಿಗೆ ಕೈಜೋಡಿಸಿ, ಬೆಂಬಲವಾಗಿ ನಿಂತಿರುವ ನಾಡಿನ ಪ್ರತಿಯೊಬ್ಬರಿಗೂ ಧನ್ಯವಾದಗಳು. ನಿಮ್ಮೆಲ್ಲರ ಸಹಕಾರ ನಿರಂತರವಾಗಿರಲಿ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…