Mysore
24
overcast clouds

Social Media

ಶುಕ್ರವಾರ, 01 ಮೇ 2026
Light
Dark

ಕೇಂದ್ರವು ಸಿಂಗಾಪುರಕ್ಕೆ ಅಕ್ಕಿ ನೀಡುತ್ತಿದೆ ಆದರೆ ನಮಗೆ ನೀಡುತ್ತಿಲ್ಲ: ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು : ಸಿಂಗಾಪುರಕ್ಕೆ ಅಕ್ಕಿ ರಫ್ತು ಮೇಲಿನ ನಿಷೇಧವನ್ನು ತೆಗೆದುಹಾಕಲು ಭಾರತ ಸರ್ಕಾರ ಒಪ್ಪಿಗೆ ನೀಡಿದ ಬೆನ್ನಲ್ಲೇ ಸಿಎಂ ಸಿದದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ರಾಜ್ಯಕ್ಕೆ ಅಕ್ಕಿ ಮಾರಾಟ ಮಾಡದೆ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

“ಕೇಂದ್ರವು ಸಿಂಗಾಪುರಕ್ಕೆ ಅಕ್ಕಿ ನೀಡುತ್ತಿದೆ, ಆದರೆ ತಮ್ಮ ರಾಜ್ಯಕ್ಕೆ ನೀಡುತ್ತಿಲ್ಲ. ಕರ್ನಾಟಕದ ಬಡವರ ಹಸಿವು ನೀಗಿಸಲು ಅನ್ನ ನೀಡಿಲ್ಲ” ಎಂದು ಅವರು ಆಕ್ರೋಶ ಹೊರ ಹಾಕಿದ್ದಾರೆ.

‘ಅನ್ನ ಭಾಗ್ಯ ಯೋಜನೆ’ ಅನುಷ್ಠಾನಕ್ಕೆ ಅಕ್ಕಿ ನೀಡುವಂತೆ ಕರ್ನಾಟಕ ಸರ್ಕಾರದ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ನಾವು ಅಕ್ಕಿಗಾಗಿ ಪಾವತಿಸುತ್ತೇವೆ ಎಂದು ಹೇಳಿದ್ದೇವೆ. ಆದರೂ ಇನ್ನೂ ಅವರು ನಮಗೆ ಅಕ್ಕಿ ನೀಡಲಿಲ್ಲ, ಬಡವರಿಗೆ ಅಕ್ಕಿ ನೀಡಬೇಕಿತ್ತು ಆದರೆ ನೀಡಲಿಲ್ಲ, ಬಿಜೆಪಿ ಮತ್ತು ಕೇಂದ್ರ ಬಡವರ ವಿರುದ್ಧ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!