ನವದೆಹಲಿ: ಬಡವರು ಮತ್ತು ಮಧ್ಯಮ ವರ್ಗದವರ ಆದಾಯ ಕಡಿಮೆಯಾಗುತ್ತಿರುವುದನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಗುರುವಾರ ವಾಗ್ದಾಳಿ ನಡೆಸಿದ್ದಾರೆ.
ಹಣದುಬ್ಬರ ಮತ್ತು ನಿರುದ್ಯೋಗದಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರೂ ‘ಸೂಟ್-ಬೂಟ್’ ಸರ್ಕಾರದ ಗುರಿ ಸ್ನೇಹಿತರ ಬೊಕ್ಕಸ ತುಂಬುವುದಾಗಿದೆ ಎಂದು ಆರೋಪಿಸಿ ಟ್ವೀಟ್ ಮಾಡಿದ್ದಾರೆ.
2016 ಮತ್ತು 2021ರ ನಡುವೆ ಬಡವರ ಆದಾಯ ಶೇ 50ರಷ್ಟು ಕಡಿಮೆಯಾಗಿದೆ. ಮಧ್ಯಮ ವರ್ಗದವರ ಆದಾಯ ಸುಮಾರು 10ರಷ್ಟು ಕುಸಿದಿದೆ ಹಾಗೂ ಶ್ರೀಮಂತರ ಆದಾಯ ಸುಮಾರು 40ರಷ್ಟು ಹೆಚ್ಚಾಗಿದೆ ಎಂದು ತೋರಿಸುವ ‘ಭಾರತದ ಗ್ರಾಹಕ ಆರ್ಥಿಕತೆ 360 ಸಮೀಕ್ಷೆ’ಯ ಆಧಾರದ ಮೇಲೆ ಕುಟುಂಬದ ತಲಾ ಆದಾಯದ ಬೆಳವಣಿಗೆಯ ಗ್ರಾಫ್ ಅನ್ನು ರಾಹುಲ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕಾರ್ಮಿಕರು ಮತ್ತು ಕಾರ್ಮಿಕರ ವೇತನದ ಬೆಳವಣಿಗೆ ದರದ ಬಗ್ಗೆ ಕಳವಳ ವ್ಯಕ್ತಪಡಿಸುವ ಲೇಖನ ಟ್ಯಾಗ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, 2014-15ರಿಂದ 2021-22ರ ಅವಧಿಯಲ್ಲಿ ವೇತನ ಹೆಚ್ಚಳದ ಪ್ರಮಾಣ ಶೇ 0.9ರಷ್ಟು (ಕೃಷಿ ಕಾರ್ಮಿಕರಿಗೆ), ಶೇ 0.2ರಷ್ಟು (ಕಟ್ಟಡ ಕಾರ್ಮಿಕರಿಗೆ), ಶೇ 0.3ರಷ್ಟು (ಕೃಷಿಯೇತರ ಕಾರ್ಮಿಕರಿಗೆ) ಎಂದು ಟ್ವೀಟ್ ಮಾಡಿದ್ದಾರೆ.
‘ಕಳೆದ 5 ವರ್ಷಗಳಲ್ಲಿ ಅದಾನಿ ಸಂಪತ್ತು ಶೇಕಡ 1440ರಷ್ಟು ಹೆಚ್ಚಾಗಿದೆ. ಮಿತ್ರ್ ಕಾ ಸಾಥ್, ಮಿತ್ರ್ ಕಾ ವಿಕಾಸ್!’ ಎಂದು ರಮೇಶ್ ಹೇಳಿದ್ದಾರೆ.
ಬಂಡವಾಳಶಾಹಿ ಸ್ನೇಹಿತರ ಅನುಕೂಲಕ್ಕಾಗಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ, ಈ ಆರೋಪವನ್ನು ಸರ್ಕಾರ ತಿರಸ್ಕರಿಸಿದೆ.
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…
2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…
ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…