ಬೆಂಗಳೂರು : ಈ ವರ್ಷದ ಸಿಇಟಿ ಪರೀಕ್ಷೆಗೆ ಆನ್‌ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ಅರ್ಹತೆಗೆ ಅನುಗುಣವಾಗಿ ಸಮರ್ಪಕ ಮಾಹಿತಿ ತಿದ್ದುಪಡಿಗೆ ಏಪ್ರಿಲ್ 15ರ ಬೆಳಿಗ್ಗೆ 11 ಗಂಟೆಯವರೆಗೆ ಅವಕಾಶವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿದ್ಯಾರ್ಥಿಗಳು ತಮ್ಮ ಪ್ರವರ್ಗ ಮೀಸಲಾತಿ, ವಾರ್ಷಿಕ ಆದಾಯ, ಕನ್ನಡ ಮಾಧ್ಯಮ, ಗ್ರಾಮೀಣ ಅಭ್ಯರ್ಥಿ, ವಿಶೇಷ ಕ್ಯಾಟಗರಿ ಇತ್ಯಾದಿಗಳನ್ನು ಸರಿಯಾಗಿ ತುಂಬಲು ಇದರಿಂದ ಅವಕಾಶವಾಗಲಿದೆ. ತಿದ್ದುಪಡಿ ಮಾಡಿದ ಬಳಿಕ, ‘ಡಿಕ್ಲರೇಷನ್ ಬಟನ್’ ಆಯ್ಕೆ ಮಾಡಿಕೊಂಡು, ನಂತರವಷ್ಟೇ ‘ಫೈನಲ್ ಸಬ್‌ಮಿಶನ್’ ಸಲ್ಲಿಸಿ, ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ತಿದ್ದುಪಡಿ ಮಾಡಿದ ಅರ್ಜಿಯ ಮುದ್ರಿತ ಪ್ರತಿಯನ್ನು ವಿದ್ಯಾರ್ಥಿಗಳು ತಮ್ಮ ಸುರಕ್ಷತೆಗಾಗಿ ಇಟ್ಟಕೊಳ್ಳಬೇಕು. ಇಲ್ಲದೆ ಹೋದರೆ, ಮೊದಲು ಸಲ್ಲಿಸಿದ್ದ ಅರ್ಜಿಯನ್ನೇ ಮುಂದಿನ ಹಂತಗಳಿಗೆ ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ.
ಇದರಲ್ಲಿ ಅಭ್ಯರ್ಥಿಯ ಹೆಸರು, ತಂದೆ-ತಾಯಿಯ ಹೆಸರು, ಜನ್ಮ ದಿನಾಂಕ ಇತ್ಯಾದಿಗಳ ಬದಲಾವಣೆಗೆ ಅವಕಾಶ ಇರುವುದಿಲ್ಲ. ಇದರಲ್ಲೇನಾದರೂ ಬದಲಾವಣೆಗಳಿದ್ದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಲಿಯನ್ನು ಸಂಪರ್ಕಿಸಬೇಕು. ಆದರೆ ಸಿಬಿಎಸ್‌ಇ/ಸಿಐಎಸ್‌ಸಿಇ ಪಠ್ಯಕ್ರಮಗಳಲ್ಲಿ 10ನೇ ತರಗತಿ ಓದಿರುವವರು ಈ ವಿವರಗಳನ್ನು ತಮ್ಮ ಅರ್ಜಿಯಲ್ಲಿ ತಿದ್ದುಪಡಿ ಮಾಡಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.
ಜೊತೆಗೆ, ರಾಷ್ಟ್ರೀಯತೆಯನ್ನು ತಿದ್ದುಪಡಿ ಮಾಡಿಕೊಳ್ಳಲು ಬಯಸುವ ಓಸಿಐ ಅಭ್ಯರ್ಥಿಗಳು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಹೆಸರಿನಲ್ಲಿ ನಿಗದಿತ ಮೊತ್ತದ ಡಿಮ್ಯಾಂಡ್ ಡ್ರಾಫ್ಟ್ ಪಡೆದುಕೊಂಡು, ಏಪ್ರಿಲ್ 13 ಮತ್ತು 15ರಂದು ನೇರವಾಗಿ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…