ಚಾಮರಾಜನಗರ: ಜಿಲ್ಲಾ ದಸರಾದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ವೇಳೆ ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ವೇದಿಕೆಯಲ್ಲೇ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣವಾಯಿತು. ಇದರಿಂದ ಕೆರಳಿದ ಇದರಿಂದ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಕಿಡಿಕಾರಿದರು.
ಚಾಮರಾಜೇಶ್ವರ ದೇವಾಲಯದ ಮುಂಭಾಗ ನಿರ್ಮಿಸಿರುವ ಮುಖ್ಯ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟಿಸಲು ಸಚಿವ ಸೋಮಣ್ಣ ವೇದಿಕೆ ಏರಿ ಕುಳಿತಿದ್ದರು. ಆಗ ಅಲ್ಲೇ ಇದ್ದ ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ದೀಪಾಲಂಕಾರದ ಅವ್ಯವಸ್ಥೆ ಖಂಡಿಸಿ ಕಪ್ಪು ಬಾವುಟ ಪ್ರದರ್ಶಿಸಿದರು. ಬಳಿಕ, ಅಲ್ಲೇ ಇದ್ದ ಪೊಲೀಸರು ನಂಜುಂಡಸ್ವಾಮಿ ಅವರನ್ನು ಹೊರಕ್ಕೆ ಎಳೆದೊಯ್ದರು. ಇನ್ನು, ಅನಿರೀಕ್ಷಿತ ಘಟನೆಯಿಂದ ಕೆಂಡಾಮಂಡಲರಾದ ಸಚಿವ ಸೋಮಣ್ಣ, ಪೊಲೀಸರು ಏನು ಕತ್ತೆ ಕಾಯುತ್ತಿದ್ದೀರಾ, ಯಾವ ರೀತಿ ವ್ಯವಸ್ಥೆ ಮಾಡಿದ್ದೀರಾ ಎಂದು ಕಿಡಿಕಾರಿದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…