Mysore
27
scattered clouds

Social Media

ಮಂಗಳವಾರ, 08 ಅಕ್ಟೋಬರ್ 2024
Light
Dark

ಚೈತ್ರಾ ಪ್ರಕರಣಕ್ಕೂ ಹಿಂದೂ ಪರ ಭಾಷಣಕ್ಕೂ ತಳುಕು ಹಾಕುವುದು ಬೇಡ : ಗೃಹ ಸಚಿವ ಡಾ ಜಿ ಪಮೇಶ್ವರ್

ಬೆಂಗಳೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದ್​ ಬಾಬು ಪೂಜಾರಿಗೆ ಕೋಟ್ಯಂತರ ರೂ. ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿದಂತೆ ಹಲವರನ್ನು ಬಂಧಿಸಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಇನ್ನು ಈ ಪ್ರಕರಣ ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಈ ಬಗ್ಗೆ ಗೃಹ ಸಚಿವ ಡಾ ಜಿ ಪಮೇಶ್ವರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನನಗೆ ಬಂದ ಮಾಹಿತಿ ಪ್ರಕಾರ ಟಿಕೆಟ್ ಕೊಡಿಸುವುದಾಗಿ ಹಣ ಪಡೆದಿದ್ದಾರೆ. 3.5 ಕೋಟಿ ರೂಪಾಯಿ ಹಣ ಪಡೆದಿರುವ ಬಗ್ಗೆ ಕಂಪ್ಲೆಂಟ್ ಆಗಿದೆ. ಸಿಸಿಬಿ ಪೊಲೀಸರ ತನಿಖೆ ಬಳಿಕ ಉಳಿದ ವಿಚಾರ ಗೊತ್ತಾಗಲಿದೆ ಎಂದು ಹೇಳಿದರು.

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದಿರುವ ಬಗ್ಗೆ ಮಾಹಿತಿ ಇದೆ. 3.5 ಕೋಟಿ ರೂಪಾಯಿ ಹಣ ಪಡೆದಿರುವ ಬಗ್ಗೆ ಕಂಪ್ಲೆಂಟ್ ಆಗಿದ್ದು, ಸಿಸಿಬಿ ಪೊಲೀಸರ ತನಿಖೆ ಬಳಿಕ ಉಳಿದ ವಿಚಾರ ಗೊತ್ತಾಗಲಿದೆ. ಪೊಲೀಸರು ಸುಮೊಟೋ ಕೇಸ್​ ದಾಖಲಿಸಿಲ್ಲ. ದೂರಿನ ಆಧಾರದ ಮೇಲೆ ಚೈತ್ರಾ ಕುಂದಾಪುರ ಬಂಧನವಾಗಿದೆ. ಈ ಕೇಸ್​​ನಲ್ಲಿ ಸ್ವಾಮೀಜಿ ಭಾಗಿಯಾಗಿದ್ದರೆ ಅವರ ಬಂಧನವೂ ಆಗುತ್ತೆ. ಯಾರೇ ತಪ್ಪು ಮಾಡಿದರೂ ಕೂಡ ಕಾನೂನಿನಡಿ ಕ್ರಮ ಆಗಲಿದೆ. ಚೈತ್ರಾ ಕುಂದಾಪುರ ಹಿಂದೂ ಪರವಾಗಿ ಭಾಷಣ ಮಾಡಿದ್ದಾರೆ. ಈ ಪ್ರಕರಣವನ್ನು ಅದಕ್ಕೆ ಮಿಕ್ಸಪ್ ಮಾಡುವುದು ಬೇಡ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ