ಬೆಂಗಳೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂ. ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿದಂತೆ ಹಲವರನ್ನು ಬಂಧಿಸಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಇನ್ನು ಈ ಪ್ರಕರಣ ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಈ ಬಗ್ಗೆ ಗೃಹ ಸಚಿವ ಡಾ ಜಿ ಪಮೇಶ್ವರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನನಗೆ ಬಂದ ಮಾಹಿತಿ ಪ್ರಕಾರ ಟಿಕೆಟ್ ಕೊಡಿಸುವುದಾಗಿ ಹಣ ಪಡೆದಿದ್ದಾರೆ. 3.5 ಕೋಟಿ ರೂಪಾಯಿ ಹಣ ಪಡೆದಿರುವ ಬಗ್ಗೆ ಕಂಪ್ಲೆಂಟ್ ಆಗಿದೆ. ಸಿಸಿಬಿ ಪೊಲೀಸರ ತನಿಖೆ ಬಳಿಕ ಉಳಿದ ವಿಚಾರ ಗೊತ್ತಾಗಲಿದೆ ಎಂದು ಹೇಳಿದರು.
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದಿರುವ ಬಗ್ಗೆ ಮಾಹಿತಿ ಇದೆ. 3.5 ಕೋಟಿ ರೂಪಾಯಿ ಹಣ ಪಡೆದಿರುವ ಬಗ್ಗೆ ಕಂಪ್ಲೆಂಟ್ ಆಗಿದ್ದು, ಸಿಸಿಬಿ ಪೊಲೀಸರ ತನಿಖೆ ಬಳಿಕ ಉಳಿದ ವಿಚಾರ ಗೊತ್ತಾಗಲಿದೆ. ಪೊಲೀಸರು ಸುಮೊಟೋ ಕೇಸ್ ದಾಖಲಿಸಿಲ್ಲ. ದೂರಿನ ಆಧಾರದ ಮೇಲೆ ಚೈತ್ರಾ ಕುಂದಾಪುರ ಬಂಧನವಾಗಿದೆ. ಈ ಕೇಸ್ನಲ್ಲಿ ಸ್ವಾಮೀಜಿ ಭಾಗಿಯಾಗಿದ್ದರೆ ಅವರ ಬಂಧನವೂ ಆಗುತ್ತೆ. ಯಾರೇ ತಪ್ಪು ಮಾಡಿದರೂ ಕೂಡ ಕಾನೂನಿನಡಿ ಕ್ರಮ ಆಗಲಿದೆ. ಚೈತ್ರಾ ಕುಂದಾಪುರ ಹಿಂದೂ ಪರವಾಗಿ ಭಾಷಣ ಮಾಡಿದ್ದಾರೆ. ಈ ಪ್ರಕರಣವನ್ನು ಅದಕ್ಕೆ ಮಿಕ್ಸಪ್ ಮಾಡುವುದು ಬೇಡ ಎಂದರು.
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…
ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…