ಬೆಂಗಳೂರು : ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನು ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದಾರೆ. 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಾಳೆ.
ವಿಚಾರಣೆ ವೇಳೆ ಮೂರ್ಛೆ ಹೋದ ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸದ್ಯ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚೈತ್ರಾ ಬಾಯಿಯಲ್ಲಿ ನೊರೆ ಬಂದ ದೃಶ್ಯ ಸೆರೆಯಾಗಿದೆ. ಈಗ ಬಂದಿರುವ ಮಾಹಿತಿ ಪ್ರಕಾರ ಚೈತ್ರಾ ಮೂರ್ಛೆ ರೋಗದಿಂದ ಬಳಲುತ್ತಿದ್ದು, ವಿಚಾರಣೆ ವೇಳೆ ಪ್ರಜ್ಞೆ ತಪ್ಪಿರುವ ಸಾಧ್ಯತೆಯಿದೆ.