BREAKING NEWS

ಚಾಮರಾಜನಗರ: ಚಿರತೆ ದಾಳಿಯಿಂದ ಮರಣ ಹೊಂದಿದ ಬಾಲಕಿಗೆ 15 ಲಕ್ಷ ಪರಿಹಾರ ನೀಡಿದ ಸರ್ಕಾರ

ಚಾಮರಾಜನಗರ: ಇತ್ತೀಚೆಗೆ ಚಾಮರಾಜನಗರದಲ್ಲಿ ಚಿರತೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಗೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಚಿರತೆ ದಾಳಿಯಿಂದ ಬಾಲಕಿಯ ದವಡೆ ಮೂಳೆ ಮುರಿದಿದ್ದ ಪರಿಣಾಮ ಮುಖ ಊದಿಕೊಂಡಿದ್ದು, ಕಳೆದ 14 ದಿನಗಳಿಂದ ಮೈಸೂರಿನ ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಜು‌ಲೈ 11ರಂದು ಆಪರೇಷನ್ ಕೂಡ ಮಾಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಅಸುನೀಗಿದ್ದಾಳೆ ಎಂದು ತಿಳಿದುಬಂದಿದೆ.

ಇನ್ನು, ಚಿರತೆ ದಾಳಿ ಪ್ರಕರಣ ನಡೆದು ಸುಮಾರು 14 ದಿನಗಳು ಕಳೆದಿದೆ. ಚಿರತೆ ಸೆರೆಗಾಗಿ ಚಿರತೆ ದಾಳಿ ನಡೆಸಿದ ಸ್ಥಳ ಹಾಗೂ ಅಕ್ಕಪಕ್ಕದಲ್ಲಿ ಮೂರು ಬೋನ್‌ಗಳನ್ನು ಸಹ ಇಡಲಾಗಿತ್ತು. ಆದರೆ ಇದುವರೆಗೂ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಸರ್ಕಾರದಿಂದ 15 ಲಕ್ಷ ರೂ ಪರಿಹಾರ
ಇನ್ನು ಚಿರತೆ ದಾಳಿಯಿಂದ ಮೃತಪಟ್ಟ ಬಾಲಕಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು ಮೃತ ಬಾಲಕಿ ಸುಶೀಲ ಕುಟುಂಬಕ್ಕೆ 15 ಲಕ್ಷ ರೂ ಘೋಷಣೆ ಮಾಡಿದೆ. ಮೃತ ಬಾಲಕಿಯ ಕುಟುಂಬಕ್ಕೆ 15 ಲಕ್ಷ ಪರಿಹಾರ ನೀಡುವುದಾಗಿ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಘೋಷಿಸಿದ್ದಾರೆ. ‘

ಚಿರತೆ ದಾಳಿಗೆ ತುತ್ತಾದ ಬಾಲಕಿ ಸಾವನ್ನಪ್ಪಿರುವ ಘಟನೆಯಿಂದ ಬೇಸರವಾಗಿದೆ. ನಾನು ತಕ್ಷಣ ಆಕೆಯ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರವನ್ನು ನಿರ್ದೇಶಿಸುತ್ತೇನೆ ಮತ್ತು ಮೃತರ ಕುಟುಂಬಕ್ಕೆ 4,000 ಮಾಸಿಕ ಭತ್ಯೆ ನೀಡಲು ಪ್ರಯತ್ನಿಸುತ್ತೇನೆ” ಎಂದು ಅವರು ಹೇಳಿದರು.

ಏನಿದು ಘಟನೆ?
ರಾಮು ಮತ್ತು ಲಲಿತಾ ದಂಪತಿಯ ಪುತ್ರಿ ಸುಶೀಲಾ ಒಬ್ಬಳೇ ಮನೆ ಮುಂದೆ ಆಟವಾಡುತ್ತಿದ್ದಳು. ಎಲ್ಲಿಂದಲೋ ಕಾಣಿಸಿಕೊಂಡ ಚಿರತೆ ಬಾಲಕಿಯ ಮೇಲೆ ದಾಳಿ ನಡೆಸಿ ಕಾಡಿಗೆ ಎಳೆದೊಯ್ಯಲು ಯತ್ನಿಸಿತ್ತು. ಅದು ಅವಳನ್ನು 200 ಮೀಟರ್ ವರೆಗೆ ಎಳೆದಿತ್ತು. ಬಾಲಕಿಯ ಕಿರುಚಾಟ ಕೇಳಿದ ಪೋಷಕರು ಹಾಗೂ ಗ್ರಾಮಸ್ಥರು ಲಾಠಿ ಬೀಸಿ ಚಿರತೆಯನ್ನು ಓಡಿಸಿದ್ದಾರೆ. ಗಲಾಟೆ ಹಿನ್ನೆಲೆಯಲ್ಲಿ ಚಿರತೆ ಬಾಲಕಿಯನ್ನು ಬಿಟ್ಟು ಕಾಡಿಗೆ ಪರಾರಿಯಾಗಿತ್ತು. ಘಟನೆಯಲ್ಲಿ ಬಾಲಕಿ ಸುಶೀಲ ಗಂಭೀರವಾಗಿ ಗಾಯಗೊಂಡಿದ್ದು, ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಾಳೆ.

ಚಿರತೆ ದಾಳಿ ಹಿನ್ನಲೆಯಲ್ಲಿ ಅರಣ್ಯಾಧಿಕಾರಿಗಳು ಬಾಲಕಿಯನ್ನು ಆಸ್ಪತ್ರೆಗೆ ಭೇಟಿ ಮಾಡಿ ಕುಟುಂಬದವರೊಂದಿಗೆ ಮಾತನಾಡಿದ್ದರು. ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕೂಡ ಅವರನ್ನು ಭೇಟಿ ಮಾಡಿದ್ದರು. ಅಧಿಕಾರಿಗಳು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಸೋಲಿಗ ಬುಡಕಟ್ಟಿನ ಜನರು ಅರಣ್ಯಕ್ಕೆ ಸಮೀಪವಿರುವ ಸ್ಥಳದಲ್ಲಿ ವಾಸಿಸುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದಲ್ಲಿ ಕಾಣಿಸಿಕೊಂಡಿರುವ ಚಿರತೆ ಹಾವಳಿಯ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಸಮುದಾಯದ ಮುಖಂಡರು ಮನವಿ ಮಾಡಿದ್ದಾರೆ.

ರಾತ್ರಿ ನಡೆದ ಈ ಘಟನೆ ಇಡೀ ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆತಂಕ ಮೂಡಿಸಿದೆ. ಇದರಿಂದ ಮನೆಯಿಂದ ಹೊರಗೆ ಕಾಲಿಡಲು, ಜಮೀನಿಗೆ ಹೋಗಲು ಭಯವಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಚಿರತೆ ದಾಳಿಯ ಭೀತಿಯಲ್ಲಿ ಜನ ಜೀವನ ನಡೆಸುವಂತಾಗಿದೆ.

ಮನೆಗೇ ನುಗ್ಗಿದ ಚಿರತೆ
ಮತ್ತೊಂದು ಘಟನೆಯಲ್ಲಿ ವಾಸದ ಮನೆಗೆ ಚಿರತೆ ನುಗ್ಗಿದ ಘಟನೆ ಹಾಸನ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಹಾಸನ ತಾಲೂಕಿನ ಹೊಸಳ್ಳಿ ಗ್ರಾಮದ ಧರ್ಮ ಎಂಬುವವರು ವಾಸವಾಗಿರುವ ಮನೆಗೆ ಚಿರತೆ ನುಗ್ಗಿದೆ. ಧರ್ಮ ಅವರ ವಾಸದ ಮನೆಗೆ ಹೊಂದಿಕೊಂಡಿರುವ ದನದ ಕೊಟ್ಟಿಗೆಯಲ್ಲಿ ಜಾನುವಾರುಗಳು ಇದ್ದ ಕಾರಣ ಅಹಾರ ಅರಸಿ ಚಿರತೆ ಮನೆಗೆ ನುಗ್ಗಿದೆ. ನಂತರ ಸ್ಥಳೀಯರ ಮಾಹಿತಿ ಆಧಾರಿಸಿ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಸಿಬ್ಬಂಧಿ ಹಾಗೂ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

andolanait

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

7 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

7 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

8 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

8 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

9 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

9 hours ago