ಮೈಸೂರು: ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಚಾಮುಂಡಿ ಬೆಟ್ಟದ ೨ ಎಕರೆ ಪ್ರದೇಶದಲ್ಲಿದ್ದ ಗಿಡಗಂಟಿಗಳು, ಹುಲ್ಲು, ಕುರುಚಲು ಸುಟ್ಟು ಭಸ್ಮವಾಗಿದೆ. ಇನ್ನು ಮಾಹಿತಿ ತಿಳಿದ ಕೂಡಲೇ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ಆರಿಸಿದ್ದಾರೆ.
ಸಂಜೆ ೬.೪೫ರ ಸಮಯದಲ್ಲಿ ಬೆಟ್ಟದ ಪಾದ ಮೆಟ್ಟಿಲು ಹತ್ತುವ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಕಿಡಿಗೇಡಿಗಳ್ಯಾರೋ ಬೆಟ್ಟ ಹತ್ತುವಾಗ ಬೆಟ್ಟದ ಮಧ್ಯ ಸ್ಥಳದಲ್ಲಿ ಬೆಂಕಿ ಹಚ್ಚಿದ್ದಾರೆ. ಬೆಂಕಿ ಗಾಳಿಯಿಂದಾಗಿ ವೇಗವಾಗಿ ವ್ಯಾಪಿಸಿದೆ.
ಈ ಬೆಂಕಿ ಸುಮಾರು ೫೦ ಎಕರೆ ಪ್ರದೇಶ ವ್ಯಾಪಿಸಿದೆ. ಆದರೆ, ೨ ಎಕರೆಯಷ್ಟು ಅರಣ್ಯ ಮಾತ್ರ ನಾಶವಾಗಿದೆ. ಬೆಂಕಿ ಆವರಿಸಿಕೊಂಡು ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ಅರ್ಧ ಗಂಟೆಗಳ ಕಾಲ ಬೆಂಕಿಯ ಉರಿ ಮತ್ತು ಹೊಗೆ ಇಡೀ ಬೆಟ್ಟವನ್ನು ಆವರಿಸಿದೆ. ಬೆಟ್ಟದ ಸಮೀಪದ ಜನರು, ಈ ಪ್ರಮಾಣದಲ್ಲಿ ಹೊಗೆಯೂ ಆವರಿಸಿಕೊಂಡಿರುವುದನ್ನು ಗಮನಿಸಿ ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಸ್ಥಳಕ್ಕೆ ಬಂದ ಅಗ್ನಿ ಶಾಮಕ ಮತ್ತು ಅರಣ್ಯ ಸಿಬ್ಬಂದಿ ಬೆಂಕಿ ಆರಿಸುವ ಕಾರ್ಯಾಚರಣೆ ಮಾಡಿದ್ದಾರೆ. ಸರಸ್ವತಿಪುರಂ, ಬನ್ನಿಮಂಟಪ, ಹೆಬ್ಬಾಳ ಠಾಣೆಗಳಿಂದ ಒಟ್ಟು ೬ ಅಗ್ನಿ ಶಾಮಕ ವಾಹನಗಳು ಮತ್ತು ಅಗ್ನಿಶಾಮಕ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಸೇರಿದಂತೆ ಸುಮಾರು ೩೦ಕ್ಕೂ ಹೆಚ್ಚು ಸಿಬ್ಬಂದಿ ಸೇರಿ ಸುಮಾರು ಸತತ ನಾಲ್ಕು ಗಂಟೆಗಳ ಕಾಲ ಕಾರ್ಯಚರಣೆ ನಡೆಸಿ, ಬೆಂಕಿಯನ್ನು ಹತೋಟಿಗೆ ತಂದರು.
ಇನ್ನು ಸಂಬಂಧ ಪ್ರತಿಕ್ರಿಯಿಸಿರುವ ಆರ್‌ಎಫ್‌ಒ ಧನ್ಯಶ್ರೀ ಅವರು ‘ ಸುಮಾರು ಎರಡು ಎಕರೆಯಷ್ಟು ಅರಣ್ಯ ಪ್ರದೇಶ ನಾಶವಾಗಿದೆ. ಬೆಂಕಿಯನ್ನು ಅಗ್ನಿ ಶಾಮಕ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸೇರಿ ಆರಿಸಿದ್ದಾರೆ’ ಎಂದು ತಿಳಿಸಿದ್ದಾರೆ.
ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರಾಜು ಪ್ರತಿಕ್ರಿಯಿಸಿ ‘ ಸಂಜೆ ೬.೫೪ ರ ಸುಮಾರಿಗೆ ಬೆಂಕಿ ಹತ್ತಿಕೊಂಡಿದೆ. ದಾರಿಹೋಕರು ಬೆಂಕಿ ಹಾಕಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿ ಶಾಮಕ ವಾಹನಗಳು ಮಧ್ಯ ಭಾಗಕ್ಕೆ ಹೋಗಿ ಬೆಂಕಿ ಆರಿಸುವುದು ಕಷ್ಟವಾದರೂ ಸುಮಾರು ೨೩ಕ್ಕೂ ಹೆಚ್ಚು ನಮ್ಮ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ’ ಎಂದು ತಿಳಿಸಿದರು.
ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…
ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…