ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ವಿಜಯಪುರ, ಧಾರವಾಡ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ ಇರಲಿದ್ದು, ರಾತ್ರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಗುರುವಾರ ರಾತ್ರಿ ಹಾಗೂ ಶುಕ್ರವಾರ ಉತ್ತರ ಒಳನಾಡು, ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಲಬುರಗಿ ಜಿಲ್ಲೆಯ ಕಮಲಾಪುರ, ಯಡ್ರಾಮಿ, ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ 5 ಸೆಂ.ಮೀ, ಕಲಬುರಗಿಯ ಆಳಂದ, ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ 4 ಸೆಂ.ಮೀ ಮಳೆಯಾಗಿದೆ.
ರಾಯಚೂರಿನ ಗಬ್ಬೂರು, ವಿಜಯಪುರ, ಆಲಮಟ್ಟಿ, ಚಿಕ್ಕಮಗ ಳೂರು, ಬೀದರ್‌ನ ಹುಮನಾ ಬಾದ್, ಕಲಬುರಗಿಯ ಖಜೂರಿಯಲ್ಲಿ 2 ಸೆಂ.ಮೀ ಮಳೆಯಾಗಿದೆ. ಧಾರವಾಡದ ಕುಂದಗೊಳ, ಯಾದಗಿರಿಯ ಕೆಂಬಾವಿ, ಚಿಕ್ಕಮಗಳೂರಿನ ಎನ್.ಆರ್.ಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…