ಬೆಂಗಳೂರು : ಚಂದ್ರಯಾನ-3 ಮಿಷನ್ ಕಾರ್ಯಾಚರಣೆ ನಿರ್ಣಾಯಕ ಹಂತದಲ್ಲಿದ್ದು, ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಕಾಲಿಡಲು ಇನ್ನೊಂದೇ ಹೆಜ್ಜೆ ಬಾಕಿಯಿದೆ. ಇಂದು ಬೆಳಗ್ಗೆ ಅಂತಿಮ ಹಂತದ ಡಿಬೂಸ್ಟಿಂಗ್ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಆಗಸ್ಟ್ 23 ರಂದು ಲ್ಯಾಂಡರ್ ವಿಕ್ರಮ್ ಚಂದ್ರನ ಅಂಗಳಕ್ಕೆ ಕಾಲಿಡಲಿದೆ.
ಆಗಸ್ಟ್ 18ರಂದು ವಿಕ್ರಮ್ ಲ್ಯಾಂಡರ್ ಡಿಬೂಸ್ಟಿಂಗ್ ಕಾರ್ಯಾಚರಣೆಯನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಯಶಸ್ವಿಗೊಳಿಸಿತ್ತು. ಲ್ಯಾಂಡರ್ ಮಾಡ್ಯೂಲ್ ತನ್ನ ಕಕ್ಷೆಯನ್ನು 113 ಕಿಮೀ x 157 ಕಿಮೀಗೆ ಇಳಿಸಿದ ಡಿಬೂಸ್ಟಿಂಗ್ ಕಾರ್ಯಾಚರಣೆಗೆ ಯಶಸ್ವಿಯಾಗಿ ಒಳಗಾಗಿತ್ತು. ಹಾಗೆಯೇ 2ನೇ ಹಾಗೂ ಅಂತಿಮ ಹಂತದ ಡಿಬೂಸ್ಟಿಂಗ್ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಲ್ಯಾಂಡರ್ ಮಾಡ್ಯೂಲ್ ಅನ್ನು ಕಕ್ಷೆಯನ್ನು 25 ಕಿಮೀ x 134 ಕಿಮೀಗೆ ಇಳಿಸಿದೆ. ಮುಂದಿನ ಹಂತದಲ್ಲಿ ಲ್ಯಾಂಡರ್‌ನ ಆಂತರಿಕ ತಪಾಸಣೆ ನಡೆಯಲಿದೆ. ಆಗಸ್ಟ್ 23 ರಂದು ಸಾಫ್ಟ್ ಲ್ಯಾಂಡಿಂಗ್ ಮಾಡುವ ಪ್ರಯತ್ನ ನಡೆದಿದೆ ಎಂದು ಇಸ್ರೋ ತನ್ನ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
ಆಗಸ್ಟ್ 17ರ ಗುರುವಾರ ಮಧ್ಯಾಹ್ನ 1:15 ಗಂಟೆಗೆ ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಲ್ಯಾಂಡರ್ ಮ್ಯಾಡ್ಯೂಲ್ ಯಶಸ್ವಿಯಾಗಿ ಬೇರ್ಪಟ್ಟಿತ್ತು. ಅದಾದ 1 ದಿನಗಳ ಬಳಿಕ ಮೊದಲ ಹಂತದ ಡಿಬೂಸ್ಟಿಂಗ್ ಕಾರ್ಯಾಚರಣೆ ಇಸ್ರೋ ಯಶಸ್ವಿಗೊಳಿಸಿತ್ತು. ಇದೀಗ ಅಂತಿಮ ಹಂತದ ಡಿಬೂಸ್ಟಿಂಗ್ ಕಾರ್ಯಾಚರಣೆ ಯಶಸ್ವಿಗೊಂಡಿದ್ದು, ಮುಂದಿನ ಹಂತವಾಗಿ ಚಂದ್ರನ ಅಂಗಳಕ್ಕಿಳಿಯಲು ಇಸ್ರೋ ಎದುರು ನೋಡುತ್ತಿದೆ.
ಜುಲೈ 14ರಂದು ಉಡಾವಣೆಗೊಂಡಿದ್ದ ಚಂದ್ರಯಾನ-3 ನೌಕೆಯು, ಆ. 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು. ಮೂರು ಕಕ್ಷೆಗಳನ್ನು ದಾಟಿ ಚಂದ್ರನ ದಕ್ಷಿಣ ಧ್ರುವದ ಮೇಲ್ಮೈ ಸನಿಹ ತಲುಪಿತ್ತು.
ಮಂಡ್ಯ: ಪಾರ್ಸೆಲ್ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್…
ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…
ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…
ಹೈದರಾಬಾದ್: ಡಿಸೆಂಬರ್.4ರಂದು ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್ ಬೇಸರ…
ಬೆಂಗಳೂರು: ಎರಡು ಕಾರು, ಎರಡು ಲಾರಿ ಹಾಗೂ ಶಾಲಾ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ…
ಬೆಂಗಳೂರು: ವಕ್ಫ್ ಮಂಡಳಿಯು ಹಿಂದೂ ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ…