BREAKING NEWS

ಚಂದ್ರಯಾನ – 3 : ಅಂತಿಮ ಹಂತದ ಡಿಬೂಸ್ಟಿಂಗ್‌ ಕಾರ್ಯಾಚರಣೆ ಯಶಸ್ವಿ

ಬೆಂಗಳೂರು : ಚಂದ್ರಯಾನ-3 ಮಿಷನ್‌ ಕಾರ್ಯಾಚರಣೆ ನಿರ್ಣಾಯಕ ಹಂತದಲ್ಲಿದ್ದು, ವಿಕ್ರಮ್‌ ಲ್ಯಾಂಡರ್‌ ಚಂದ್ರನ ಮೇಲೆ ಕಾಲಿಡಲು ಇನ್ನೊಂದೇ ಹೆಜ್ಜೆ ಬಾಕಿಯಿದೆ. ಇಂದು ಬೆಳಗ್ಗೆ ಅಂತಿಮ ಹಂತದ ಡಿಬೂಸ್ಟಿಂಗ್‌ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಆಗಸ್ಟ್‌ 23 ರಂದು ಲ್ಯಾಂಡರ್‌ ವಿಕ್ರಮ್‌ ಚಂದ್ರನ ಅಂಗಳಕ್ಕೆ ಕಾಲಿಡಲಿದೆ.

ಆಗಸ್ಟ್‌ 18ರಂದು ವಿಕ್ರಮ್ ಲ್ಯಾಂಡರ್ ಡಿಬೂಸ್ಟಿಂಗ್ ಕಾರ್ಯಾಚರಣೆಯನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಯಶಸ್ವಿಗೊಳಿಸಿತ್ತು. ಲ್ಯಾಂಡರ್‌ ಮಾಡ್ಯೂಲ್‌ ತನ್ನ ಕಕ್ಷೆಯನ್ನು 113 ಕಿಮೀ x 157 ಕಿಮೀಗೆ ಇಳಿಸಿದ ಡಿಬೂಸ್ಟಿಂಗ್ ಕಾರ್ಯಾಚರಣೆಗೆ ಯಶಸ್ವಿಯಾಗಿ ಒಳಗಾಗಿತ್ತು. ಹಾಗೆಯೇ 2ನೇ ಹಾಗೂ ಅಂತಿಮ ಹಂತದ ಡಿಬೂಸ್ಟಿಂಗ್‌ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಲ್ಯಾಂಡರ್‌ ಮಾಡ್ಯೂಲ್‌ ಅನ್ನು ಕಕ್ಷೆಯನ್ನು 25 ಕಿಮೀ x 134 ಕಿಮೀಗೆ ಇಳಿಸಿದೆ. ಮುಂದಿನ ಹಂತದಲ್ಲಿ ಲ್ಯಾಂಡರ್‌ನ ಆಂತರಿಕ ತಪಾಸಣೆ ನಡೆಯಲಿದೆ. ಆಗಸ್ಟ್‌ 23 ರಂದು ಸಾಫ್ಟ್‌ ಲ್ಯಾಂಡಿಂಗ್‌ ಮಾಡುವ ಪ್ರಯತ್ನ ನಡೆದಿದೆ ಎಂದು ಇಸ್ರೋ ತನ್ನ ಟ್ವಿಟ್ಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಆಗಸ್ಟ್‌ 17ರ ಗುರುವಾರ ಮಧ್ಯಾಹ್ನ 1:15 ಗಂಟೆಗೆ ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಲ್ಯಾಂಡರ್‌ ಮ್ಯಾಡ್ಯೂಲ್‌ ಯಶಸ್ವಿಯಾಗಿ ಬೇರ್ಪಟ್ಟಿತ್ತು. ಅದಾದ 1 ದಿನಗಳ ಬಳಿಕ ಮೊದಲ ಹಂತದ ಡಿಬೂಸ್ಟಿಂಗ್ ಕಾರ್ಯಾಚರಣೆ ಇಸ್ರೋ ಯಶಸ್ವಿಗೊಳಿಸಿತ್ತು. ಇದೀಗ ಅಂತಿಮ ಹಂತದ ಡಿಬೂಸ್ಟಿಂಗ್‌ ಕಾರ್ಯಾಚರಣೆ ಯಶಸ್ವಿಗೊಂಡಿದ್ದು, ಮುಂದಿನ ಹಂತವಾಗಿ ಚಂದ್ರನ ಅಂಗಳಕ್ಕಿಳಿಯಲು ಇಸ್ರೋ ಎದುರು ನೋಡುತ್ತಿದೆ.

ಜುಲೈ 14ರಂದು ಉಡಾವಣೆಗೊಂಡಿದ್ದ ಚಂದ್ರಯಾನ-3 ನೌಕೆಯು, ಆ. 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು. ಮೂರು ಕಕ್ಷೆಗಳನ್ನು ದಾಟಿ ಚಂದ್ರನ ದಕ್ಷಿಣ ಧ್ರುವದ ಮೇಲ್ಮೈ ಸನಿಹ ತಲುಪಿತ್ತು.

lokesh

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

2 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

3 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

5 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

7 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

7 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

7 hours ago