BREAKING NEWS

ಭೂಮಿಯ ಕಕ್ಷೆ ತೊರೆದ ಚಂದ್ರಯಾನ-3 ನೌಕೆ : ಚಂದ್ರನತ್ತ ಪಯಣ

ಶ್ರೀಹರಿಕೋಟಾ : ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ನೌಕೆಯು ಭೂಮಿಯ ಕಕ್ಷೆ ತೊರೆದು ಚಂದ್ರನತ್ತ ಪಯಣ ಆರಂಭಿಸಿದೆ.

ಈ ಬಗ್ಗೆ ಸ್ವತಃ ಇಸ್ರೋ ಮಾಹಿತಿ ನೀಡಿದ್ದು, ಚಂದ್ರಯಾನ–3 ಬಾಹ್ಯಾಕಾಶ ನೌಕೆಯನ್ನು ಟ್ರಾನ್ಸ್‌ಲೂನಾರ್‌ ಕಕ್ಷೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದೇವೆ. ಚಂದ್ರಯಾನ–3 ಬಾಹ್ಯಾಕಾಶ ನೌಕೆ ಭೂಮಿಯ ಸುತ್ತಲಿನ ಕಕ್ಷೆಯನ್ನು ಪೂರ್ಣಗೊಳಿಸಿದ್ದು, ಚಂದ್ರನ ಕಕ್ಷೆಯತ್ತ ಸಾಗಿದೆ. ಇದೀಗ ಲೂನಾರ್ ಟ್ರಾನ್ಸ್‌ಫರ್‌ ಟ್ರಾಜೆಕ್ಟರಿ ಪಥದಲ್ಲಿ ನೌಕೆ ಸಾಗುತ್ತಿದೆ ಎಂದು ಇಸ್ರೊ ತಿಳಿಸಿದೆ.

ಸೋಮವಾರ ಮಧ್ಯರಾತ್ರಿ ಭೂಮಿಯ ಕಕ್ಷೆಯಿಂದ ಬೇರ್ಪಟ್ಟ ನೌಕೆ ಚಂದ್ರನೆಡೆಗೆ ಸಾಗಿದ್ದು, ನೌಕೆ ಚಂದ್ರನತ್ತ ಆಗಮಿಸುತ್ತಿದ್ದಂತೆ ಲೂನಾರ್‌–ಆರ್ಬಿಟ್‌ ಇನ್‌ರ್ಸಶನ್‌ ಕಾರ್ಯ ಪ್ರಾರಂಭವಾಗುತ್ತದೆ. ಆಗಸ್ಟ್‌ 5ಕ್ಕೆ ಎಲ್‌ಓಐ ಮಾಡಲು ಯೋಜಿಸಲಾಗಿದೆ. ಆಗಸ್ಟ್‌ 17ರಂದು ಪ್ಯೊಪಲ್ಷನ್‌ ಮಾಡ್ಯೂಲ್‌ ಮತ್ತು ಲ್ಯಾಂಡರ್ ಮಾಡ್ಯೂಲ್‌ ಅನ್ನು ಬೇರ್ಪಡಿಸುವ ಪ್ರಕ್ರಿಯೆ ನಡೆಯಲಿದೆ. ಆಗಸ್ಟ್‌ 23ರ ಸಂಜೆ 5.47ಕ್ಕೆ ಲ್ಯಾಂಡರ್‌ ಅನ್ನು ಸುರಕ್ಷಿತವಾಗಿ ಚಂದ್ರನ ಮೇಲೆ ಲ್ಯಾಂಡ್‌ ಮಾಡಲಾಗುತ್ತದೆ ಎಂದು ಇಸ್ರೋ ತಿಳಿಸಿದೆ.

ಸೋಮವಾರ ನಸುಕಿನ 12 ಗಂಟೆಯಿಂದ 12.30ರ ನಡುವೆ ಚಂದ್ರನ ಕಕ್ಷೆಗೆ ಸೇರಿಸುವ ಕಾರ್ಯಾಚರಣೆ ನಡೆದಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಚಂದ್ರಯಾನ-3 ಮಿಷಿನ್ ವೇಳಾಪಟ್ಟಿಗೆ ಅನುಗುಣವಾಗಿ ನಡೆದಿದ್ದು, ಬಾಹ್ಯಾಕಾಶ ನೌಕೆಯ ಸ್ಥಿತಿ ಸಹಜವಾಗಿದೆ ಎಂದು ಇಸ್ರೋ ಅಧಿಕಾರಿಗಳು ಹೇಳಿದ್ದಾರೆ.

ಚಂದ್ರಯಾನ-3 ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ಅನ್ನು ಹೊಂದಿದೆ. ಲ್ಯಾಂಡರ್ ಮತ್ತು ರೋವರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದು 14 ದಿನಗಳ ಕಾಲ ಅಲ್ಲಿ ಪ್ರಯೋಗಗಳನ್ನು ನಡೆಸುತ್ತದೆ. ಈ ಕಾರ್ಯಾಚರಣೆಯ ಮೂಲಕ, ಇಸ್ರೋ ಚಂದ್ರನ ಮೇಲ್ಮೈಯಲ್ಲಿ ಭೂಕಂಪಗಳು ಹೇಗೆ ಸಂಭವಿಸುತ್ತವೆ ಮತ್ತು ಚಂದ್ರನ ಮಣ್ಣನ್ನು ಅಧ್ಯಯನ ಮಾಡುತ್ತದೆ ಎಂಬುದನ್ನು ಕಂಡುಹಿಡಿಯುತ್ತದೆ. ಇಸ್ರೋ ಆಗಸ್ಟ್ 23 ರಂದು ಚಂದ್ರನ ಮೇಲ್ಮೈಯಲ್ಲಿ ಲ್ಯಾಂಡರ್ ಅನ್ನು ಮೃದುವಾಗಿ ಇಳಿಸಲು ಪ್ರಯತ್ನಿಸುತ್ತದೆ.

lokesh

Recent Posts

ಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…

1 min ago

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

3 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

9 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

9 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

9 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

9 hours ago