Mysore
21
overcast clouds
Light
Dark

ಚಂದ್ರಯಾನ-3 ಮಿಷನ್‌ ಸಕ್ಸಸ್‌ : ಚಂದ್ರನನ್ನು ಚುಂಬಿಸಿದ ವಿಕ್ರಮ

ಬೆಂಗಳೂರು : ಇಸ್ರೋ ವಿಜ್ಞಾನಿಗಳ ಪರಿಶ್ರಮ, ಭಾರತೀಯರ ಪ್ರಾರ್ಥನೆ ಫಲವಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ನಿಗದಿ ಪಡಿಸಿದ ಸಮಯಕ್ಕೆ ಸರಿಯಾಗಿ ಚಂದ್ರಯಾನ-3 ವಿಕ್ರಮ್‌ ಲ್ಯಾಂಡರ್‌ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟಿತು. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಯಿತು.

ಇಸ್ರೋ ಸಂಜೆ 6:04ರ ಹೊತ್ತಿಗೆ ವಿಕ್ರಮ್‌ ಲ್ಯಾಂಡರ್‌ ಅನ್ನು ಚಂದ್ರನ ಮೇಲೆ ಇಳಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿತು.

ಜುಲೈ 14: ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಮಧ್ಯಾಹ್ನ 2:35 ರ ಹೊತ್ತಿಗೆ ಉಡಾವಣೆ. ಎಲ್‌ವಿಎಂ3 ಎಂ4 ಉಡ್ಡಯನ ವಾಹನವು ಚಂದ್ರಯಾನ-3 ಯೋಜನೆಯ ಉಪಕರಣಗಳನ್ನು ಹೊತ್ತು ನಿರ್ದಿಷ್ಟ ಕಕ್ಷೆಗೆ ಸೇರಿಸಿತು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ