ನವದೆಹಲಿ : ಚಂದ್ರನ ಅಂಗಳಕ್ಕೆ ಕಳುಹಿಸಿರುವ ಚಂದ್ರಯಾನ-3 ಲ್ಯಾಂಡರ್ ಸೆರೆಹಿಡಿದ ಚಿತ್ರಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದೆ.
ಚಿತ್ರಗಳಲ್ಲಿ ಚಂದ್ರನ ಮೇಲ್ಮೈನ ಕುಳಿಗಳಾದ ಅರಿಸ್ಟಾರ್ಕಸ್, ಎಡಿಂಗ್ಟನ್ ಮತ್ತು ಪೈಥಾಗರಸ್ ಸೆರೆಯಾಗಿದೆ. ಅಲ್ಲದೇ ಚಂದ್ರನ ಮೇಲಿರುವ ಕಪ್ಪು ಬಯಲು ಪ್ರದೇಶ ಓಷಿಯನಸ್ ಪ್ರೋಸೆಲ್ಲಾರಮ್ ಪ್ರದೇಶ ಕೂಡ ಸ್ಪಷ್ಟವಾಗಿ ಕಾಣಿಸುತ್ತದೆ. ಹಂಚಿಕೊಳ್ಳಲಾದ ಫೋಟೋಗಳಲ್ಲಿ ಜುಲೈ 14ರಂದು ತೆಗೆಯಲಾದ ಭೂಮಿಯ ಚಿತ್ರವೂ ಸೇರಿದೆ.
ಆಗಸ್ಟ್ 5 ರಂದು ಚಂದ್ರಯಾನ-3 ಬಾಹ್ಯಾಕಾಶ ನೌಕೆ ಚಂದ್ರನ ಕಕ್ಷೆಯನ್ನು ಪ್ರವೇಶಿಸಿತ್ತು. ಈಗ ನೌಕೆಯು ಚಂದ್ರನ ಮೇಲೆ ಇಳಿಯಲು ಕೇವಲ ಹದಿನೈದು ದಿನಗಳು ಮಾತ್ರ ಉಳಿದಿವೆ. ಆಗಸ್ಟ್ 23 ರಂದು ಚಂದ್ರನ ಮೇಲೆ ಇಳಿಯುವ ನಿರೀಕ್ಷೆಯಿದೆ. ಚಂದ್ರನ ಹತ್ತಿರಕ್ಕೆ ತೆಗೆದುಕೊಂಡು ಹೋಗಲು ಮತ್ತು ಚಂದ್ರನ ಮೇಲ್ಮೈಯಲ್ಲಿ ಇಳಿಯಲು ಲ್ಯಾಂಡರ್ (ವಿಕ್ರಮ್) ಅನೇಕ ತಂತ್ರಗಳನ್ನು ನಿರ್ವಹಿಸಲಿದೆ.
ಬುಧವಾರ ಚಂದ್ರನ ಮೇಲ್ಮೈನ 1437 ಕಿಮೀ ವೃತ್ತದ ಕಕ್ಷೆಯಿಂದ 174 ಕಿಮೀಗೆ ಇಳಿಸಲಾಗಿದೆ. ಚಂದ್ರನ ಮೇಲೆ ಲ್ಯಾಂಡ್ ಆಗುವುದಕ್ಕೆ ಇನ್ನು 1437 ಕಿ.ಮೀ. ಅಷ್ಟೇ ಕ್ರಮಿಸಬೇಕಿದೆ. ಮುಂದಿನ ಕಾರ್ಯಾಚರಣೆಯನ್ನು ಆಗಸ್ಟ್ 14 ರಂದು 11:30 ಮತ್ತು 12:30 ಗಂಟೆಗಳ ನಡುವೆ ನಿಗದಿಪಡಿಸಲಾಗಿದೆ.
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಮತ್ತೊಮ್ಮೆ ಕಠಿಣ ಎಚ್ಚರಿಕೆ ನೀಡಿದ್ದು, “ನಾವು ಹೇಳುವ ಒಪ್ಪಂದವನ್ನು…
ಬೆಂಗಳೂರು : ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ…
ರಮೇಶ್ ಎಚ್.ಕೆ. ಶಿವಮೊಗ್ಗ ಕರ್ನಾಟಕದಲ್ಲಿ ದಲಿತ ವರ್ಗಗಳ ರಾಜಕಾರಣ ಎಂದಾಕ್ಷಣ ಕೆ. ಹೆಚ್. ರಂಗನಾಥ್, ಬಿ. ರಾಚಯ್ಯ, ಎನ್. ರಾಚಯ್ಯ,…
ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್…
ವಾಷಿಂಗ್ಟನ್ : ಇರಾನ್ ಧ್ವಜವಿರುವ ಸರಕು ಹಡಗನ್ನು (ಟೂಸ್ಕಾ) ಒಮಾನ್ ಕೊಲ್ಲಿಯಲ್ಲಿ (ಹಾರ್ಮುಜ್ ಜಲಸಂಧಿ ಸಮೀಪ) ನಮ್ಮ ಭದ್ರತಾ ಪಡೆಗಳು…
‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಮನದಾಳದ ಮಾತು ಇಲ್ಲಿದೆ ನಿರೂಪಣೆ.. ಆರ್.ಟಿ.ವಿಠ್ಠಲಮೂರ್ತಿ ನಾನು…