ನವದೆಹಲಿ : ಚಂದ್ರನ ಅಂಗಳದಲ್ಲಿ ಇಸ್ರೋದ ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್ ಬಳಿಕ ಹಲವು ಗಂಟೆಗಳ ನಂತರ ವಿಕ್ರಮ್ ಲ್ಯಾಂಡರ್‌ನಿಂದ ರೋವರ್ ಹೊರಬಂದಿದ್ದು, ಚಂದ್ರನ ಮೇಲೆ ವೈಜ್ಞಾನಿಕ ಅಧ್ಯಯನ ಆರಂಭಿಸಿದೆ.
ಈ ಕುರಿತು ಸುಮಾರು 8:26ರ ಹೊತ್ತಿಗೆ ಇಸ್ರೋ ಟ್ವಿಟ್ಟರ್ ಖಾತೆಯಲ್ಲಿ ಅಧಿಕೃತ ಮಾಹಿತಿ ಹಂಚಿಕೊಂಡಿದೆ. ಚಂದ್ರಯಾನ-3 ರೋವರ್: ಭಾರತದಲ್ಲಿ ತಯಾರಿಸಲಾಗಿದೆ, ಚಂದ್ರನಿಗಾಗಿ ಮಾಡಲ್ಪಟ್ಟಿದೆ. ಚಂದ್ರಯಾನ-3 ರೋವರ್ ಲ್ಯಾಂಡರ್‌ನಿಂದ ಕೆಳಗೆ ಇಳಿಯಿತು. ಚಂದ್ರನ ಮೇಲೆ ಭಾರತ ನಡೆದಾಡಿತು. ಶೀಘ್ರವೇ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಾಗುವುದು ಎಂದು ಇಸ್ರೋ ತಿಳಿಸಿದೆ.
ಯಶಸ್ವಿ ಲ್ಯಾಂಡಿಂಗ್ ಬಳಿಕ ಮುಂದಿನ ಹಂತ ಪ್ರಗ್ಯಾನ್ ರೋವರ್ ಚಂದ್ರನ ಮೇಲ್ಮೈನಲ್ಲಿ ಅಧ್ಯಯನ ನಡೆಸಲಿದೆ. ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದು ಧೂಳೆಬ್ಬಿಸಿದೆ. ಇದೇ ಕಾರಣಕ್ಕೆ ಪ್ರಗ್ಯಾನ್ ರೋವರ್ ಕೆಲ ಗಂಟೆಗಳು ಕಾದು ಹೊರಬಂದಿದೆ ಎನ್ನಲಾಗಿದೆ.
ಪ್ರಗ್ಯಾನ್ ರೋವರ್ ತಡವಾಗಿ ಹೊರಬರಲು ಕಾರಣವೇನು? : ಸುಮಾರು 1,749.8 ಕೆಜಿ ತೂಕದ ಲ್ಯಾಂಡರ್ ಬಂದು ಚಂದ್ರನ ಮೇಲೆ ಹೆಜ್ಜೆ ಇಟ್ಟಾಗ ಅದರ ಸುತ್ತಲೂ ಧೂಳು ಆವರಿಸಿತು. ಅಲ್ಲಿನ ದುರ್ಬಲ ಗುರುತ್ವಾಕರ್ಷಣೆ ಶಕ್ತಿಯ ಕಾರಣದಿಂದ ಆ ದಟ್ಟವಾಗಿರುವ ಧೂಳು ತಕ್ಷಣಕ್ಕೆ ಕಡಿಮೆ ಆಗುವುದು ಕಷ್ಟ. ಈ ವೇಳೆ ರೋವರ್ ಹೊರ ಬಂದರೆ, ಆ ಧೂಳಿನ ಕಣಗಳು ರೋವರ್‌ನಲ್ಲಿರುವ ಸೆನ್ಸರ್‌ಗಳು, ಕ್ಯಾಮೆರಾಗಳ ಮೇಲೆ ಕುಳಿತುಕೊಳ್ಳುತ್ತದೆ. ಹೀಗಾಗಿ ಸ್ವಲ್ಪ ಸಮಯ ಕಾದು ನಂತರ ರೋವರ್ ಹೊರಬಂದಿದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…