ಬೆಂಗಳೂರು: ಭಾರತದ ಬಹು ನಿರೀಕ್ಷಿತ ಮಿಷನ್ ಚಂದ್ರಯಾನ-3ರ ಕಕ್ಷೆ ಬದಲಾಯಿಸುವ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ.
ಮಾಹಿತಿಯ ಪ್ರಕಾರ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಇಂದು ಚಂದ್ರಯಾನ-3′ ಅನ್ನು ಚಂದ್ರನ ಕಕ್ಷೆಗೆ ಎತ್ತುವ ನಾಲ್ಕನೇ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಕೆಲಸವನ್ನು ಬೆಂಗಳೂರು ಇಸ್ರೋ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ (ISTRAC) ನಿಂದ ಮಾಡಲಾಗಿದೆ.
ಚಂದ್ರಯಾನ-3 ತನ್ನ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದು ಇಸ್ರೋ ಹೇಳಿದೆ. ಈಗ ಜುಲೈ 25ರಂದು ಮಧ್ಯಾಹ್ನ 2 ರಿಂದ 3 ಗಂಟೆಯವರೆಗೆ ಮುಂದಿನ ಫೈರಿಂಗ್ ಮಾಡುವ ಯೋಜನೆ ಇದೆ. ಅಂತಾರಾಷ್ಟ್ರೀಯ ಚಂದ್ರ ದಿನದ ಸಂದರ್ಭದಲ್ಲಿ ಭಾರತವು ಚಂದ್ರಯಾನ-3 ಅನ್ನು ಚಂದ್ರನ ಹತ್ತಿರಕ್ಕೆ ತಂದಿದೆ ಎಂದು ಇಸ್ರೋ ಹೇಳಿದೆ.
ಇದಕ್ಕೂ ಮುನ್ನ ಜುಲೈ 15ರಂದು ಚಂದ್ರಯಾನ-3 ಭೂಮಿಯ ಮೊದಲ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿತ್ತು. ಇದರ ನಂತರ, ಚಂದ್ರಯಾನವು ಜುಲೈ 17ರಂದು ಭೂಮಿಯ ಎರಡನೇ ಕಕ್ಷೆಯನ್ನು ಮತ್ತು ಜುಲೈ 18ರಂದು ಭೂಮಿಯ ಮೂರನೇ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿತ್ತು.
ಕುವೈತ್/ನವದೆಹಲಿ: 26ನೇ ಅರೇಬಿಯನ್ ಗಲ್ಫ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಕುವೈತ್ ದೊರೆ ಶೇಖ್ ಮಿಶಾಲ್…
371 J ಕೊಡುಗೆಯಾಗಿ 371 ಬೆಡ್ ಗಳ ಆಸ್ಪತ್ರೆ: ಸಿಎಂ ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ…
‘ಅಂಬೇಡ್ಕರ್ ಅಂಬೇಡ್ಕರ್ ಎನ್ನುವುದು ಈಗ ಒಂದು ಫ್ಯಾಶನ್ ಆಗಿಬಿಟ್ಟಿದೆ. ಹೀಗೆ ಹೇಳುವವರು ಭಗವಂತನ ಹೆಸರನ್ನಾದರೂ ಇಷ್ಟು ಬಾರಿ ಸ್ಮರಿಸಿದ್ದರೆ ಅವರಿಗೆ…
ರಸ್ತೆ ಬದಿಯೇ ಕಸದ ವಾಹನ ನಿಲುಗಡೆಗೊಳಿಸಬೇಕಾದ ಪರಿಸ್ಥಿತಿ; ದುರ್ವಾಸನೆಯಿಂದ ಸಾರ್ವಜನಿಕರಿಕೆ ಕಿರಿಕಿರಿ ಕೃಷ್ಣ ಸಿದ್ದಾಪುರ ಸಿದ್ದಾಪುರ: ಪಟ್ಟಣದಲ್ಲಿ ಕಸ ವಿಲೇವಾರಿ…
ಭೇರ್ಯ: ಸಂಜೆ ನಂತರ ನಿಲ್ದಾಣದೊಳಗೆ ಬಾರದ ಬಸ್‌ಗಳು; ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ ಇಲ್ಲ ಭೇರ್ಯ ಮಹೇಶ್ ಭೇರ್ಯ: ಗ್ರಾಮದ…
ಕೀರ್ತಿ ಇದನ್ನು ನೀವು ಊಹಿಸಲೂ ಸಾಧ್ಯವಿಲ್ಲ. ಚಹ ಮಾಡಿದ ನಂತರ ಉಳಿದ ಜೊಗಟು, ಈರುಳ್ಳಿ ಸಿಪ್ಪೆ, ಚಿಂದಿ ಬಟ್ಟೆ, ಹರಿದ…