BREAKING NEWS

ಚಂದ್ರಯಾನ-3 ಯಶಸ್ವಿ: “ಈ ಕ್ಷಣ ಅಭೂತಪೂರ್ವ, ಐತಿಹಾಸಿಕ” ಎಂದ ಪ್ರಧಾನಿ ಮೋದಿ

ಜೋಹಾನ್ಸ್‌ಬರ್ಗ್ : ಬ್ರಿಕ್ಸ್ ಶೃಂಗಸಭೆಗಾಗಿ ದಕ್ಷಿಣ ಆಫ್ರಿಕಾದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಲ್ಯಾಂಡ್ ಆಗುವ ಕ್ಷಣಗಳನ್ನು ವೀಕ್ಷಿಸಿದರು.

ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯುತ್ತಿದ್ದಂತೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷರು “ಭಾರತ ಚಂದ್ರನ ಮೇಲಿದೆ” ಎಂದು ಹೇಳಿದರು.

ಬಳಿಕ ವರ್ಚುವಲ್ ಮೂಲಕ ದೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಕ್ಷಣ ಅಮೂಲ್ಯವಾಗಿದೆ ಮತ್ತು ಅಭೂತಪೂರ್ವವಾಗಿದೆ. ಈ ಕ್ಷಣ ನವ ಭಾರತದ ಉದಯವಾಗಿದೆ. ಈ ಕ್ಷಣ 1.4 ಬಿಲಿಯನ್ ಹೃದಯ ಬಡಿತಗಳ ಶಕ್ತಿಯಾಗಿದೆ. ಅಮೃತ ಕಾಲದ ಈ ಹಂತದಲ್ಲಿ ಅಮೃತ ವರ್ಷ ಯಶಸ್ವಿಯಾಗಿದೆ” ಎಂದು ಹೇಳಿದರು.

ಚಂದ್ರನ ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆಯನ್ನು ಇಳಿಸಿದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಈ ಅಭೂತಪೂರ್ವ ಸಾಧನೆಗಾಗಿ ಇಸ್ರೋ, ಅದರ ವಿಜ್ಞಾನಿಗಳನ್ನು ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

“ನಾನು ದಕ್ಷಿಣ ಆಫ್ರಿಕಾದಲ್ಲಿರಬಹುದು ಆದರೆ ನನ್ನ ಹೃದಯ ಯಾವಾಗಲೂ ಚಂದ್ರಯಾನ ಮಿಷನ್‌ನಲ್ಲಿದೆ”  “ಇದೊಂದು ಐತಿಹಾಸಿಕ ಕ್ಷಣ. ನವ ಭಾರತದ ಹೊಸ ಹಾರಾಟಕ್ಕೆ ನಾವು ಸಾಕ್ಷಿಯಾಗಿದ್ದೇವೆ; ಚಂದ್ರಯಾನ-3 ಲ್ಯಾಂಡರ್ ಮಾಡ್ಯೂಲ್ ಸಾಫ್ಟ್ ಲ್ಯಾಂಡಿಂಗ್ ಮಾಡುತ್ತಿದ್ದಂತೆ ಬೆಂಗಳೂರಿನ ಇಸ್ರೋದ ಮಿಷನ್ ಆಪರೇಷನ್ಸ್ ಕಾಂಪ್ಲೆಕ್ಸ್‌ನಲ್ಲಿ ಸಂಭ್ರಮಾಚರಣೆ ಮಾಡುವ ಮೂಲಕ ಹೊಸ ಇತಿಹಾಸ ಬರೆಯಲಾಗಿದೆ ಎಂದು ಮೋದಿ ಹೇಳಿದ್ದಾರೆ.

andolanait

Recent Posts

ಮಧ್ಯ ಪ್ರಾಚ್ಯ ಬಿಕ್ಕಟ್ಟು | ವಿದೇಶಾಂಗ ನೀತಿ ಬದಲಿಸಲು ಖರ್ಗೆ ಆಗ್ರಹ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…

2 hours ago

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

3 hours ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

3 hours ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

4 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

5 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

6 hours ago