Mysore
15
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಚಂದ್ರಯಾನ-3 : ಚಂದ್ರನ ಮೇಲೆ ಮತ್ತೆ ಇಳಿದ ವಿಕ್ರಮ್

ಬೆಂಗಳೂರು : ಚಂದ್ರಯಾನ-3 ಕಾರ್ಯಾಚರಣೆಯ ವಿಕ್ರಮ್ ಲ್ಯಾಂಡರ್ ಮತ್ತೆ ಚಂದ್ರನ ಮೇಲೆ ಇಳಿದಿರುವುದಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಹೇಳಿದೆ.

ಈ ಕುರಿತು ಟ್ವೀಟ್ ಮಾಡಿರುವ ಇಸ್ರೋ, ವಿಕ್ರಮ್ ಲ್ಯಾಂಡರ್ ತನ್ನ ಉದ್ದೇಶಗಳನ್ನು ಮೀರಿದೆ. ಭಾನುವಾರ ನಡೆದ ಚಂದ್ರಯಾನ-3 ಲ್ಯಾಂಡರ್ ಹೋಪ್ (ಭರವಸೆ) ಪ್ರಯೋಗ ಯಶಸ್ವಿಯಾಗಿದೆ. ಆಜ್ಞೆಯ ಮೇರೆಗೆ ವಿಕ್ರಮ್ ಲ್ಯಾಂಡರ್ ತನ್ನ ಎಂಜಿನ್‌ಗಳನ್ನು ಹಾರಿಸಿತು, ನಿರೀಕ್ಷೆಯಂತೆ ಸುಮಾರು 40 ಸೆಂ.ಮೀ ಎತ್ತರಕ್ಕೆ ಹಾರಿ, 30 – 40 ಸೆಂ.ಮೀ ದೂರದಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಇಸ್ರೋ ಮಾಹಿತಿ ನೀಡಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!