ಬೆಂಗಳೂರು : ಚಂದ್ರಯಾನ-3 ಕಾರ್ಯಾಚರಣೆಯ ವಿಕ್ರಮ್ ಲ್ಯಾಂಡರ್ ಮತ್ತೆ ಚಂದ್ರನ ಮೇಲೆ ಇಳಿದಿರುವುದಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಹೇಳಿದೆ.
ಈ ಕುರಿತು ಟ್ವೀಟ್ ಮಾಡಿರುವ ಇಸ್ರೋ, ವಿಕ್ರಮ್ ಲ್ಯಾಂಡರ್ ತನ್ನ ಉದ್ದೇಶಗಳನ್ನು ಮೀರಿದೆ. ಭಾನುವಾರ ನಡೆದ ಚಂದ್ರಯಾನ-3 ಲ್ಯಾಂಡರ್ ಹೋಪ್ (ಭರವಸೆ) ಪ್ರಯೋಗ ಯಶಸ್ವಿಯಾಗಿದೆ. ಆಜ್ಞೆಯ ಮೇರೆಗೆ ವಿಕ್ರಮ್ ಲ್ಯಾಂಡರ್ ತನ್ನ ಎಂಜಿನ್‌ಗಳನ್ನು ಹಾರಿಸಿತು, ನಿರೀಕ್ಷೆಯಂತೆ ಸುಮಾರು 40 ಸೆಂ.ಮೀ ಎತ್ತರಕ್ಕೆ ಹಾರಿ, 30 – 40 ಸೆಂ.ಮೀ ದೂರದಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಇಸ್ರೋ ಮಾಹಿತಿ ನೀಡಿದೆ.
Chandrayaan-3 Mission:
🇮🇳Vikram soft-landed on 🌖, again!Vikram Lander exceeded its mission objectives. It successfully underwent a hop experiment.
On command, it fired the engines, elevated itself by about 40 cm as expected and landed safely at a distance of 30 – 40 cm away.… pic.twitter.com/T63t3MVUvI
— ISRO (@isro) September 4, 2023