ನವದೆಹಲಿ : ಅದಾನಿ ಸಂಸ್ಥೆಯಿಂದ ಸ್ಟಾಕ್ ಮಾರ್ಕೆಟ್ ತಿರುಚುವಿಕೆ ಕುರಿತ ಆರೋಪಗಳಿಗೆ ಸಂಬಂಧಿಸಿದ ದೂರುಗಳ ವಿಚಾರಣೆಯನ್ನು ಸತತ ಮುಂದೂಡಲಾಗುತ್ತಿರುವ ಬಗ್ಗೆ ಪರಿಶೀಲಿಸಲು ಸುಪ್ರೀಂ ಕೋರ್ಟ್ ರಿಜಿಸ್ಟ್ರಿಗೆ ಹೇಳುವುದಾಗಿ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಹೇಳಿದ್ದಾರೆ.
ಈ ಪ್ರಕರಣದ ವಿಚಾರಣೆ ಮೂಲತಃ ಆಗಸ್ಟ್ 28ಕ್ಕೆ ನಿಗದಿಯಾಗಿದ್ದರೂ ಮುಂದೂಡಲಾಗಿದೆ.
ವಿಚಾರಣೆಯನ್ನು ನಿರಂತರ ಮುಂದೂಡಲಾಗುತ್ತಿರುವ ಕುರಿತು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸೋಮವಾರದ ಕಲಾಪ ಆರಂಭಕ್ಕಿಂತ ಮುಂಚೆ ಮುಖ್ಯ ನ್ಯಾಯಮೂರ್ತಿಗಳ ಗಮನಕ್ಕೆ ತಂದಾಗ ಮೇಲಿನ ಭರವಸೆಯನ್ನು ಅವರಿಗೆ ನೀಡಲಾಗಿದೆ.
ಅದಾನಿ ಸಂಸ್ಥೆ ಸ್ಟಾಕ್ ಮಾರ್ಕೆಟ್ ತಿರುಚುವಿಕೆಯನ್ನು ಮಾಡಿದೆ ಎಂಬ ಆರೋಪಗಳ ಕುರಿತಾದ 24 ಅಂಶಗಳ ಪೈಕಿ 22 ಅಂಶಗಳ ತನಿಖೆ ಪೂರ್ಣಗೊಳಿಸಿರುವುದಾಗಿ ಸೆಬಿ ಆಗಸ್ಟ್ 25ರಂದು ಸಲ್ಲಿಸಿದ್ದ ನವೀಕೃತ ಸ್ಥಿತಿಗತಿ ವರದಿಯಲ್ಲಿ ತಿಳಿಸಿತ್ತು.
ಹಿಂಡೆನ್‌ಬರ್ಗ್ ಆರೋಪಗಳ ನಂತರ 24 ವಿಚಾರಗಳ ಕುರಿತು ತನಿಖೆ ನಡೆಸುವಂತೆ ಸೆಬಿಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…