ಬೆಂಗಳೂರು: ಚೆಕ್‌ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಮಧು ಬಂಗಾರಪ್ಪ ಅವರಿಗೆ 6,96,70,000 ಕೋಟಿ ರೂ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದು (ಶುಕ್ರವಾರ) ಆದೇಶ ಹೊರಡಿಸಿದೆ.
ರಾಜೇಶ್ ಎಕ್ಸ್‌ಪೋರ್ಟ್ಸ್ ಸಂಸ್ಥೆ ನೀಡಿದ್ದ ಚೆಕ್‌ಬೌನ್ಸ್ ಪ್ರಕರಣದಲ್ಲಿ ಸಚಿವರಿಗೆ 6.96 ಕೋಟಿ ರೂಗಳ ಡಂದವನ್ನು ವಿಧಿಸಿದೆ. ಒಂದು ವೇಳೆ ದಂಡ ಪಾವತಿಸಲು ಆಗದೇ ಹೋದರೆ 6 ತಿಂಗಳ ಸೆರೆವಾಸ ಅನುಭವಿಸುವಂತೆ ಕೋರ್ಟ್ ಆದೇಶ ನೀಡಿದೆ.
ಆಕಾಶ್ ಆಡಿಯೋ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಇವರು, 2011ರಲ್ಲಿ ಚೆಕ್ ನೀಡಿದ್ದರು. 50 ಲಕ್ಷ ರೂ ಪಾವತಿಸಿ ಉಳಿದ ಮೊತ್ತ ಪಾವತಿಸಿರಲಿಲ್ಲ. ಖಾತೆಯಲ್ಲಿ ಹಣ ಇಲ್ಲದ ಕಾರಣ ಚೆಕ್‌ಬೌನ್ಸ್ ಆಗಿತ್ತು. ಈ ಹಿನ್ನಲೆ ರಾಜೇಶ್ ಎಕ್ಸ್‌ಪೋರ್ಟ್ಸ್ ಸಂಸ್ಥೆ 6.60 ಕೋಟಿ ರೂಗಳ ಪರಿಹಾರ ಕೋರಿ ಕೋರ್ಟ್ ಮೊರೆ ಹೋಗಿತ್ತು.
ನ್ಯಾಯಾಧೀಶರಾದ ಜೆ.ಪ್ರೀತ್ ಅವರು ಸಚಿವರಿಗೆ ದಂಡ ವಿಧಿಸಿ ಆದೇಶ ಹೋರಡಿಸಿದ್ದಾರೆ. 1, ಕೋಟಿ ರೂಗಳಲ್ಲಿ 6,96,70,000 ರೂಗಳನ್ನು ದೂರುದಾರರಿಗೆ ಪರಿಹಾರವಾಗಿ ನೀಡಬೇಕು ಮತ್ತು ರೂ. 10,000 ಗಳನ್ನು ಸರ್ಕಾರಕ್ಕೆ ದಂಡವಾಗಿ ಕಟ್ಟಬೇಕು ಎಂದು ಆದೇಶ ನೀಡಿದಾರೆ.
ಇದರ ಬದಲಿಗೆ ಮುಧು ಬಂಗಾರಪ್ಪ ಅವರು ಕೋರ್ಟ್ ಗೆ ಮುಚ್ಚಳಿಕೆ ನೀಡಿದ್ದು, ಇದನ್ನು ಒಪ್ಪಲು ಕೊರ್ಟ್ ನಿರಾಕರಿಸಿದೆ. ಈ ಹಿಂದೆಯೂ ಕೋರ್ಟ್ ನೀಡಿದ್ದ ಮುಚ್ಚಳಿಕೆಯನ್ನು ಸಚಿವರು ಪಾಲಿಸಿರಿಲಿಲ್ಲ ಹಾಗಾಗಿ ಕೋರ್ಟ್ ಅವರಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…