ಬೆಂಗಳೂರು : ಮಂಡ್ಯ ನಿಲ್ದಾಣ ಹತ್ತಿರದ ಲೆವಲ್ ಕ್ರಾಸ್ ಗೇಟ್– 73ರ ಕೆಳ ಸೇತುವೆ ಕಾಮಗಾರಿಯ ಸಲುವಾಗಿ ಜುಲೈ 16 ರಿಂದ 31 ರವರೆಗೆ 20 ರೈಲುಗಳನ್ನು ರದ್ದು/ಭಾಗಶಃ ರದ್ದು/ಮಾರ್ಗ ಬದಲಾವಣೆ ಮತ್ತು ನಿಯಂತ್ರಿಸಲಾಗುತ್ತಿದೆ. ಈ ಮಧ್ಯೆ ರೈಲ್ವೆ ಇಲಾಖೆ ಈ ಬಗ್ಗೆ ಪ್ರಯಾಣಿಕರಿಗೆ ಸರಿಯಾಗಿ ಮಾಹಿತಿ ನೀಡದ ಕಾರಣ ಚೆನ್ನೈ ಸೆಂಟ್ರಲ್- ಮೈಸೂರು ಎಕ್ಸ್ಪ್ರೆಸ್ ರೈಲಿನ ನೂರಾರು ಪ್ರಯಾಣಿಕರು ಸೋಮವಾರ ಬೆಳಿಗ್ಗೆ ಮದ್ದೂರು ರೈಲ್ವೆ ನಿಲ್ದಾಣದಲ್ಲಿ ಪರದಾಡುವಂತಾಯಿತು.
ಜುಲೈ 30 ರಂದು ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ನಿಂದ ಪ್ರಾರಂಭವಾಗುವ ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ – ಮೈಸೂರು ಎಕ್ಸ್ಪ್ರೆಸ್ ರೈಲನ್ನು ಮಾರ್ಗ ಮಧ್ಯ 90 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ ಎಂದು ರೈಲ್ವೆ ಪ್ರಕಟಣೆ ಹೊರಡಿಸಿತ್ತು. ಆದರೆ ಸೋಮವಾರ ಬೆಳಗಿನ ಜಾವ ರಾಮನಗರಕ್ಕೆ ಬಂದ ರೈಲು ಅಲ್ಲಿ ಒಂದು ಗಂಟೆ ನಿಂತು, ಬಳಿಕ 7 ಗಂಟೆಗೆ ಮದ್ದೂರಿಗೆ ಬಂದು ಬೆಳಿಗ್ಗೆ 9 ಗಂಟೆಯಾದರೂ ಅಲ್ಲಿಂದ ಮುಂದಕ್ಕೆ ಚಲಿಸಲಿಲ್ಲ. ಇದರಿಂದ ರೈಲಿನಲ್ಲಿದ್ದ ನೂರಾರು ಪ್ರಯಾಣಿಕರು ಪರದಾಡುವಂತಾಯಿತು.
ರಾತ್ರಿ 9.15ಕ್ಕೆ ಚೆನ್ನೈ ಬಿಟ್ಟ ಈ ರೈಲು ಬೆಳಗ್ಗೆ 6ಕ್ಕೆ ಮೈಸೂರಿಗೆ ಬರಬೇಕಿತ್ತು. ಬೆಂಗಳೂರಿನಿಂದ ಮೈಸೂರಿಗೆ ಟಿಕೆಟ್ ಪಡೆದು ರೈಲು ಹತ್ತಿದ ನೂರಾರು ಪ್ರಯಾಣಿಕರು ರೈಲೈ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಯನ್ನು ಖಂಡಿಸಿದರು. ರೈಲು ವಿಳಂಬವಾಗುವ ಸಾಧ್ಯತೆ ಬಗ್ಗೆ ಟಿಕೆಟ್ ಕೌಂಟರ್ ನಲ್ಲಿಯೇ ಮಾಹಿತಿ ನೀಡಿದ್ದರೆ ನಾವು ಅರ್ಧ ದಾರಿಯಲ್ಲಿ ಬಂದು ಪರದಾಡುವ ಪರಿಸ್ಥಿತಿ ಇರುತ್ತಿರಲಿಲ್ಲ. ತುರ್ತು ಕೆಲಸಕ್ಕೆಂದು ಬೆಳಗ್ಗಿನ ಜಾವ ರೈಲು ಹಿಡಿದು ಸಂಕಷ್ಟ ಎದುರಿಸುವಂತಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮದ್ದೂರು ರೈಲು ನಿಲ್ದಾಣದಲ್ಲಿ ನೂರಾರು ಪ್ರಯಾಣಿಕರು ಅಧಿಕಾರಿಗಳ ಮುಂದೆ ತಮ್ಮ ಆಕ್ರೋಶ ವ್ಯಕ್ತಪಡಿಸಿ ಬದಲಿ ವ್ಯವಸ್ಥೆ ಮಾಡುವಂತೆ ಆಗ್ರಹಿಸಿದರು.
• ರೈಲು ಸಂಖ್ಯೆ 06559 ಕೆ.ಎಸ್.ಆರ್ ಬೆಂಗಳೂರು – ಮೈಸೂರು ಮೆಮು ರೈಲನ್ನು ಜುಲೈ 31 ರಂದು ಮದ್ದೂರು-ಮೈಸೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗಿದೆ. ಈ ರೈಲು ಮದ್ದೂರು ನಿಲ್ದಾಣದಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ.
• ರೈಲು ಸಂಖ್ಯೆ 06256 ಮೈಸೂರು – ಕೆ.ಎಸ್.ಆರ್ ಬೆಂಗಳೂರು ಮೆಮು ರೈಲನ್ನು ಕೂಡ 31 ರಂದು ಮೈಸೂರು-ಮದ್ದೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ. ಈ ರೈಲು ಮದ್ದೂರು ನಿಲ್ದಾಣದಿಂದ ಹೊರಡಲಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…