ಚೆನ್ನೈ : ವರುಣನ ಅಬ್ಬರಕ್ಕೆ ಚೆನ್ನೈ ಅಕ್ಷರಶಃ ತತ್ತರಿಸಿ ಹೋಗಿದೆ. ಮಿಚಾಂಗ್ ಚಂಡಮಾರುತದಿಂದಾಗಿ ಚೆನ್ನೈನಲ್ಲಿ ಮಳೆರಾಯ ಎಡಬಿಡದೆ ಸುರಿಯುತ್ತಿದ್ದಾನೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತವಾಗಿ ಹೋಗಿದೆ.
ಮಳೆರಾಯನ ಆರ್ಭಟಕ್ಕೆ ಮನೆಯ ಗೋಡೆ ಕುಸಿತವಾಗಿದ್ದು,ಇಬ್ಬರು ಸಾವಿಗೀಡಾಗಿದ್ದಾರೆ. ಮುಂಜಾಗೃತಾ ಕ್ರಮವಾಗಿ ಚನ್ನೈಗೆ ಸಂಚರಿಸುವ ರೈಲು ಹಾಗೂ ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಹಾಗಾಗಿ ಚೆನ್ನೈಗೆ ತೆರಳುವ ಪ್ರಯಾಣಿಕರು ಕಾರು ಅಥವಾ ಬಸ್ ಗಳಲ್ಲಿ ಪ್ರಯಾಣಿಸುತ್ತಿದ್ದಾರೆ.
ಸದ್ಯ ತಮಿಳುನಾಡು ಸರ್ಕಾರ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ರಕ್ಷಣಾ ಕರ್ಯವನ್ನು ಕೈಗೊಂಡಿದೆ. ಮಳೆಯಿಂದಾಗಿ ಚೆನ್ನೈ ವಿಮಾನ ನಿಲ್ದಾಣ ಸಂಪೂರ್ಣವಾಗಿ ಜಲಾವೃತ್ತವಾಗಿದ್ದು, ವಿಮಾನಗಳ ಹಾರಾಟವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.
ಮಳೆರಾಯನ ರೌದ್ರ ನರ್ತನಕ್ಕೆ ಚೆನ್ನೈ ನ ಮರೀನಾ ಬೀಚ್ ಮುಳುಗಡೆಯಾಗಿದ್ದು, ಮನೆಗಳಿಗೂ ಸಹ ನೀರು ನುಗ್ಗಿದೆ. ಜನರು ತುರ್ತು ಅವಶ್ಯಕತೆಗಳಿಗೂ ಕೂಡ ಹೊರಪರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಶಾಲಾ ಕಾಲೇಜುಗಳಿಗೂ ಸಹ ರಜೆ ಘೋಷಣೆ ಮಾಡಲಾಗಿದೆ.
ಇನ್ನು ಚೆನ್ನೈನಲ್ಲಿ ಎದ್ದಿರುವ ಮಿಚಾಂಗ್ ಚಂಡಮಾರುತದಿಂದಾಗಿ ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ. ಬೆಂಗಳೂರು, ಮೈಸೂರು,ಚಾಮರಾಜನಗರ ಸೇರಿದಂತೆ ಇತರೆ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…