ಬೆಂಗಳೂರು : ಸದಾ ಒಂದಲ್ಲ ಒಂದು ಹೇಳಿಕೆಯಿಂದ ವಿವಾದಕ್ಕೆ ಸಿಲುಕುತ್ತಿರುವ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರು ಇದೀಗ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಗುಡುಗಿದ್ದಾರೆ. ಅಲ್ಲದೆ, ನೂತನ ಸಚಿವ ಸತೀಶ್ ಜಾರಕಿಹೊಳಿಯವರನ್ನೂ ಪ್ರಶ್ನೆ ಮಾಡಿದ್ದಾರೆ.
ಇಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ಕಂಠೀರವ ಸ್ಟೇಡಿಯಂನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಸಿದ್ದರಾಮಯ್ಯ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಇವರ ಜೊತೆ 8 ಸಚಿವರು ಪದಗ್ರಹಣ ಮಾಡಿದರು. ಮುಖ್ಯಮಂತ್ರಿಗಳಿಗೆ ಮತ್ತು ಸಚಿವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಈ ವೇಳೆ ಸಿದ್ದರಾಮಯ್ಯ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿರುವುದು ಚರ್ಚೆಗೆ ಕಾರಣವಾಗಿದೆ. ಏಕೆಂದರೆ ಕಳೆದ ಬಾರಿ ಸಿದ್ದರಾಮಯ್ಯ ಅವರು ಸತ್ಯದ ಹೆಸರಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದರು. ಇದೀಗ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇನ್ನು ಈ ಕುರಿತು ನಟ ಚೇತನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಟೀಕಿಸಿದ್ದಾರೆ. ‘ವಿಚಾರವಾದಿ’ ಎಂದು ಕರೆಸಿಕೊಳ್ಳುವ ಸಿದ್ದರಾಮಯ್ಯ ಅವರು ಕರ್ನಾಟಕದ ಸಿಎಂ ಆಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರಾ? ಯಾವ/ಯಾರು ದೇವರು? ದೇವರು ಎಲ್ಲಿದ್ದಾನೆ/ಳೆ/ರೆ? ಇದು ನಿರ್ದಿಷ್ಟವಾದ ಸೈದ್ಧಾಂತಿಕ ಆರಂಭವಲ್ಲ ಎಂದು ಪೋಸ್ಟ್ ಮಾಡಿದ್ದಾರೆ.
ಅಲ್ಲದೆ, ಶಾಸಕ ಸತೀಶ ಜಾರಕಿಹೊಳಿ, ಅವರು ‘ಬುದ್ಧ-ಬಸವ-ಅಂಬೇಡ್ಕರ್’ ಅಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ಪಕ್ಷವು ತನ್ನ ಸ್ವ-ಲಾಭದಾಯಕ ರಾಜಕೀಯ ಅಧಿಕಾರಕ್ಕಾಗಿ ನಮ್ಮ ಸಮಾನತೆಯ ಐಕಾನ್ ಗಳನ್ನು ಯಾವಾಗಲೂ ಹೈಜಾಕ್ ಮಾಡಿದೆ. ಎಸ್.ಟಿ ನಾಯಕ ಸಮುದಾಯದ ಸತೀಶ್ ಜಾರಕಿಹೊಳಿ ಶೋಷಿತ ಎಸ್.ಟಿ ಗಳಿಗೆ ಒಳಮೀಸಲಾತಿಯನ್ನು ಬೆಂಬಲಿಸುತ್ತಾರೆಯೇ..? ಅಥವಾ ಬುದ್ಧ-ಬಸವ-ಅಂಬೇಡ್ಕರ್ ಕೇವಲ ಗಿಮಿಕ್ ಮಾತ್ರವೇ.? ಎಂದು ಚೇತನ್ ಪ್ರಶ್ನೆ ಮಾಡಿದ್ದಾರೆ.
https://www.facebook.com/chetanahimsa/posts/23954495924149398
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…