ಬೆಂಗಳೂರು : ದಿಲ್ಲಿ, ಪಂಜಾಬ್ ಬಳಿಕ ಕರ್ನಾಟಕದಲ್ಲಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿರುವ ಆಮ್ ಆದ್ಮಿ ಪಕ್ಷದಲ್ಲಿ ಮಹತ್ವದ ಬದಲಾವಣೆಗಳಾಗಿವೆ. ಆಮ್ ಆದ್ಮಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಹಿರಿಯ ನಟ ಹಾಗೂ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರನ್ನು ನೇಮಕ ಮಾಡಲಾಗಿದೆ. ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳ ಮುಂಚೆ ಈ ಬೆಳವಣಿಗೆಯಾಗಿರುವುದು ಪಕ್ಷ ಸಂಘಟನೆಗೆ ಮತ್ತಷ್ಟು ಚುರುಕು ಬರುವ ಸಾಧ್ಯತೆ ಇದೆ.
ಈವರೆಗೂ ಎಎಪಿ ಕರ್ನಾಟಕದ ರಾಜ್ಯಾಧ್ಯಕ್ಷರಾಗಿದ್ದ ಪೃಥ್ವಿ ರೆಡ್ಡಿ ಅವರನ್ನು ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ಎಎಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ದಿಲ್ಲಿಯಲ್ಲಿ ಬುಧವಾರ ರಾತ್ರಿ ಘೋಷಣೆ ಮಾಡಿದ್ದಾರೆ. ರಾಜ್ಯಾಧ್ಯಕ್ಷರ ಜೊತೆ ರಾಜ್ಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಬಿಟಿ ನಾಗಣ್ಣ ಮತ್ತು ಅರ್ಜುನ್ ಹಲಗಿಗೌಡ ಅವರನ್ನು ನೇಮಕ ಮಾಡಲಾಗಿದೆ ಎಂದು ಪಕ್ಷ ಅಧಿಕೃತವಾಗಿ ತಿಳಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಪೃಥ್ವಿ ರೆಡ್ಡಿ, ಪಕ್ಷದ ನೂತನ ರಾಜ್ಯಾಧ್ಯಕ್ಷ ನೇಮಕವಾದ ಮುಖ್ಯಮಂತ್ರಿ ಚಂದ್ರು ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷವನ್ನು ಸೇರಿದ್ದರು. ಆದರೆ, ಯಾವುದೇ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸದೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರು. ಇದೀಗ ಅವರನ್ನು ಎಎಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಮುಖ್ಯಮಂತ್ರಿ ಚಂದ್ರು ಅವರು ಜನತಾ ಪಕ್ಷದ ಮೂಲಕ ಗೌರಿಬಿದನೂರಿನಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ವಿಧಾನಸೌಧದಲ್ಲಿ ಅನೇಕ ವಿಷಯಗಳ ಬಗ್ಗೆ ಪ್ರಸ್ತಾಪಿಸಿ ಗಮನ ಸೆಳೆದಿದ್ದರು. ಆ ಚುನಾವಣೆಯಲ್ಲಿ ಅನಂತನಾಗ್, ಶಂಕರ್‌ನಾಗ್ ಅವರು ಟಿಕೆಟ್ ತಿರಸ್ಕರಿಸಿದ ಕಾರಣ ಮುಖ್ಯಮಂತ್ರಿ ಚಂದ್ರುಗೆ ಟಿಕೆಟ್ ಸಿಕ್ಕಿತ್ತು. ಆದರೆ, 1989ರಲ್ಲಿ ಜನತಾ ದಳದೊಂದಿಗೆ ಜನತಾ ಪಕ್ಷ ವಿಲೀನವಾಯ್ತು.
ಬಳಿಕ ರಾಮಕೃಷ್ಣ ಹೆಗಡೆ ಮತ್ತು ಎಚ್‌ಡಿ ದೇವೇಗೌಡ ಅವರ ನಡುವೆ ಭಿನ್ನಮತದ ಕಾರಣ 1991ರಲ್ಲಿ ಜನತಾ ದಳ ತೊರೆದ ಮುಖ್ಯಮಂತ್ರಿ ಚಂದ್ರು ಬಿಜೆಪಿ ಸೇರಿದರು. 1998 ಹಾಗೂ 2004ರಲ್ಲಿ ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿ ನೇಮಕವಾಗಿದ್ದರು. 2008ರಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕವಾಗಿದ್ದರು. 2013ರಲ್ಲಿ ಬಿಜೆಪಿಯನ್ನು ತೊರೆದ ಅವರು 2014ರಲ್ಲಿ ಕಾಂಗ್ರೆಸ್ ಸೇರಿದರು. ಆದರೆ, 2022ರಲ್ಲಿ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡದ ಕಾರಣ ಕಾಂಗ್ರೆಸ್ ತೊರೆದು ಆಮ್ ಆದ್ಮಿ ಪಕ್ಷವನ್ನು ಸೇರಿದ್ದರು.
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…