BREAKING NEWS

ಎಎಪಿ ನೂತನ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ!

ಬೆಂಗಳೂರು : ದಿಲ್ಲಿ, ಪಂಜಾಬ್‌ ಬಳಿಕ ಕರ್ನಾಟಕದಲ್ಲಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿರುವ ಆಮ್‌ ಆದ್ಮಿ ಪಕ್ಷದಲ್ಲಿ ಮಹತ್ವದ ಬದಲಾವಣೆಗಳಾಗಿವೆ. ಆಮ್‌ ಆದ್ಮಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಹಿರಿಯ ನಟ ಹಾಗೂ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರನ್ನು ನೇಮಕ ಮಾಡಲಾಗಿದೆ. ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳ ಮುಂಚೆ ಈ ಬೆಳವಣಿಗೆಯಾಗಿರುವುದು ಪಕ್ಷ ಸಂಘಟನೆಗೆ ಮತ್ತಷ್ಟು ಚುರುಕು ಬರುವ ಸಾಧ್ಯತೆ ಇದೆ.

ಈವರೆಗೂ ಎಎಪಿ ಕರ್ನಾಟಕದ ರಾಜ್ಯಾಧ್ಯಕ್ಷರಾಗಿದ್ದ ಪೃಥ್ವಿ ರೆಡ್ಡಿ ಅವರನ್ನು ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ಎಎಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್‌ ಪಾಠಕ್‌ ದಿಲ್ಲಿಯಲ್ಲಿ ಬುಧವಾರ ರಾತ್ರಿ ಘೋಷಣೆ ಮಾಡಿದ್ದಾರೆ. ರಾಜ್ಯಾಧ್ಯಕ್ಷರ ಜೊತೆ ರಾಜ್ಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಬಿಟಿ ನಾಗಣ್ಣ ಮತ್ತು ಅರ್ಜುನ್ ಹಲಗಿಗೌಡ ಅವರನ್ನು ನೇಮಕ ಮಾಡಲಾಗಿದೆ ಎಂದು ಪಕ್ಷ ಅಧಿಕೃತವಾಗಿ ತಿಳಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಪೃಥ್ವಿ ರೆಡ್ಡಿ, ಪಕ್ಷದ ನೂತನ ರಾಜ್ಯಾಧ್ಯಕ್ಷ ನೇಮಕವಾದ ಮುಖ್ಯಮಂತ್ರಿ ಚಂದ್ರು ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಚಂದ್ರು ಆಮ್‌ ಆದ್ಮಿ ಪಕ್ಷವನ್ನು ಸೇರಿದ್ದರು. ಆದರೆ, ಯಾವುದೇ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸದೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರು. ಇದೀಗ ಅವರನ್ನು ಎಎಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಮುಖ್ಯಮಂತ್ರಿ ಚಂದ್ರು ರಾಜಕೀಯ ಜೀವನ!

ಮುಖ್ಯಮಂತ್ರಿ ಚಂದ್ರು ಅವರು ಜನತಾ ಪಕ್ಷದ ಮೂಲಕ ಗೌರಿಬಿದನೂರಿನಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ವಿಧಾನಸೌಧದಲ್ಲಿ ಅನೇಕ ವಿಷಯಗಳ ಬಗ್ಗೆ ಪ್ರಸ್ತಾಪಿಸಿ ಗಮನ ಸೆಳೆದಿದ್ದರು. ಆ ಚುನಾವಣೆಯಲ್ಲಿ ಅನಂತನಾಗ್‌, ಶಂಕರ್‌ನಾಗ್‌ ಅವರು ಟಿಕೆಟ್‌ ತಿರಸ್ಕರಿಸಿದ ಕಾರಣ ಮುಖ್ಯಮಂತ್ರಿ ಚಂದ್ರುಗೆ ಟಿಕೆಟ್‌ ಸಿಕ್ಕಿತ್ತು. ಆದರೆ, 1989ರಲ್ಲಿ ಜನತಾ ದಳದೊಂದಿಗೆ ಜನತಾ ಪಕ್ಷ ವಿಲೀನವಾಯ್ತು.

ಬಳಿಕ ರಾಮಕೃಷ್ಣ ಹೆಗಡೆ ಮತ್ತು ಎಚ್‌ಡಿ ದೇವೇಗೌಡ ಅವರ ನಡುವೆ ಭಿನ್ನಮತದ ಕಾರಣ 1991ರಲ್ಲಿ ಜನತಾ ದಳ ತೊರೆದ ಮುಖ್ಯಮಂತ್ರಿ ಚಂದ್ರು ಬಿಜೆಪಿ ಸೇರಿದರು. 1998 ಹಾಗೂ 2004ರಲ್ಲಿ ಬಿಜೆಪಿಯಿಂದ ವಿಧಾನ ಪರಿಷತ್‌ ಸದಸ್ಯರಾಗಿ ನೇಮಕವಾಗಿದ್ದರು. 2008ರಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕವಾಗಿದ್ದರು. 2013ರಲ್ಲಿ ಬಿಜೆಪಿಯನ್ನು ತೊರೆದ ಅವರು 2014ರಲ್ಲಿ ಕಾಂಗ್ರೆಸ್‌ ಸೇರಿದರು. ಆದರೆ, 2022ರಲ್ಲಿ ಪರಿಷತ್‌ ಸದಸ್ಯರನ್ನಾಗಿ ನೇಮಕ ಮಾಡದ ಕಾರಣ ಕಾಂಗ್ರೆಸ್‌ ತೊರೆದು ಆಮ್‌ ಆದ್ಮಿ ಪಕ್ಷವನ್ನು ಸೇರಿದ್ದರು.

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

3 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

4 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

4 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

6 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

6 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

10 hours ago