Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ನಾಡದೇವತೆ ಭುವನೇಶ್ವರಿಗೆ ಪುಷ್ಪಾರ್ಚನೆ, ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: 68ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯದ್ಯಂತ ಹಲವು ಶಾಲೆಗಳ ಶಾಲಾ ಮಕ್ಕಳು ಪಾಲ್ಗೊಂಡಿದ್ದು, ಕನ್ನಡ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು. ಸಮಾರಂಭದಲ್ಲಿ ಬೆಂಗಳೂರು ನಗರಾಭಿವೃದ್ಧಿ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ