BREAKING NEWS

ಬಿಸಿಯೂಟಕ್ಕೆ ಬಂದ ಅಕ್ಕಿಯಲ್ಲಿ ಪ್ಲಾಸ್ಟಿಕ್:‌ ಪೋಷಕರ ಆಕ್ರೋಶ

ಮಡಿಕೇರಿ: ಶಾಲಾ ಮಕ್ಕಳ ಬಿಸಿಯೂಟಕ್ಕೆ ಸರಬರಾಜು ಆಗಬೇಕಿದ್ದ ಅಕ್ಕಿಯಲ್ಲಿ ಮಾತ್ರೆ ಗಾತ್ರದ ಪ್ಲಾಸ್ಟಿಕ್ ವಸ್ತು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ.
ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫ್ರೌಡಶಾಲಾ ವಿಭಾಗದ ಮಕ್ಕಳ ದಾಸೋಹದ ಬಿಸಿಯೂಟಕ್ಕೆ ಸರಬರಾಜಾಗುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮಣಿಯಂತ ವಸ್ತುಗಳು ಪತ್ತೆಯಾಗಿದ್ದು ಜಿಲ್ಲೆಯಲ್ಲಿನ ಶಾಲಾ ಆಡಳಿತ ಮಂಡಳಿಗಳಿಗೆ ಆತಂಕ ತಂದೊಡ್ಡಿದೆ. ಶಾಲಾ ಮಕ್ಕಳಿಗೆ ಬಿಸಿಯೂಟ ತಯಾರಿ ಮಾಡಲು ಮುಂದಾದ ಅಡುಗೆ ಸಿಬ್ಬಂದಿಗಳು ಅಕ್ಕಿಯನ್ನ ತೊಳೆಯುವ ಸಂಧರ್ಭದಲ್ಲಿ ಪ್ಲಾಸ್ಟಿಕ್ ನಂತ ಮಣಿಗಳು ನೀರಿನಲ್ಲಿ ತೇಲುತ್ತಿರುವುದನ್ನು ಕಂಡಿದ್ದಾರೆ. ತಕ್ಷಣವೇ ಎಚ್ಚೆತ್ತ ಅಡುಗೆ ಸಿಬ್ಬಂದಿ ಶಾಲೆಯ ಮುಖ್ಯಸ್ಥರ ಗಮನಕ್ಕೆ ತಂದಿದ್ದಾರೆ.
ಬಿಸಿಯೂಟಕ್ಕೆ ಸರಬರಾಜಾದ ಅಕ್ಕಿಯನ್ನ ಶಿಕ್ಷಕರು ಪರಿಶೀಲಿಸಿದಾಗ ಶಾಲೆಗೆ ರವಾನೆಯಾದ ಒಂದು ಮೂಟೆಯಲ್ಲಿ ಈ ರೀತಿಯ ಅಕ್ಕಿಯ ರೂಪದಲ್ಲಿರುವ ಮಣಿಗಳು ಪತ್ತೆಯಾಗಿದೆ. ಅಡುಗೆ ಸಿಬ್ಬಂದಿ ಸರಿಯಾಗಿ ಗಮನಿಸದೆ ಅಡುಗೆ ಮಾಡಿದ್ದಲ್ಲಿ ಅನಾಹುತ ನಡೆಯುವ ಸಾಧ್ಯತೆ ಇತ್ತು. ಮಡಿಕೇರಿಯ ಸರ್ಕಾರಿ ಫ್ರೌಡಶಾಲೆಯಲ್ಲಿ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು ಬಹುತೇಕರು ಬಡವರ್ಗದ ಮಕ್ಕಳಾಗಿದ್ದಾರೆ. ಬಡ ಮಕ್ಕಳ ಬಿಸಿಯೂಟದ ಅಕ್ಕಿಯನ್ನೂ ಕೂಡ ಕಲಬೆರಕೆ ಮಾಡಿ ಸರಬರಾಜು ಮಾಡಿರುವ ಬಗ್ಗೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದೆರಡು ವಾರದ ಹಿಂದೆಯಷ್ಟೇ ಬಂದ ಅಕ್ಕಿಯ ಒಂದು ಚೀಲದಲ್ಲಿ ಈ ರೀತಿಯ ಮಣಿಗಳು ಪತ್ತೆಯಾಗಿದ್ದು ಶಾಲಾ ಆಡಳಿತ ಮಂಡಳಿ ಹಾಗೂ ಎಸ್‌ ಡಿಎಂಸಿ ಸದಸ್ಯರು ಅಧಿಕಾರಿಗಳ ಗಮನಕ್ಕೂ ತಂದಿದ್ದು ಸರಬರಾಜಾದ ಅಕ್ಕಿಯನ್ನ ಹಿಂದಿರುಗಿಸಲಾಗಿದೆ. ಮಕ್ಕಳಿಗೆ ಮಾತ್ರಲ್ಲ ಸರಬರಾಜಾಗುವ ಪಡಿತರವಲ್ಲದೆ ನ್ಯಾಯಬೆಲೆ ಅಂಗಡಿಗಳಿಗೂ ಈ ಅಕ್ಕಿ ಸರಬರಾಜಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜಿಲ್ಲೆಗೆ ಬರುವ ಅಕ್ಕಿ ಬಹುತೇಕ ಹರಿಯಾಣದಿಂದ ಬರುತ್ತಿದೆ ಎನ್ನಲಾಗಿದೆ. ಹರಿಯಾಣ ಭಾಗದಿಂದ ಬಂದ ಅಕ್ಕಿಯನ್ನ ಮಡಿಕೇರಿಯ ಫುಡ್ ಸಪ್ಲೇ ಗೋಡಾನ್ ನಲ್ಲಿ ಶೇಖರಿಸಿಟ್ಟು ಅಲ್ಲಿಂದ ಎಲ್ಲಕಡೆಗಳಿಗೂ ಅಕ್ಕಿ ಸಪ್ಲೆ ಅಗುತ್ತದೆ. ಇನ್ನೂ ಘಟನೆ ಸಂಬಂಧ ಶಾಲೆಯ ಎಸ್.ಡಿ.ಎಂ.ಸಿ ಪ್ರಮುಖರು ಕೊಡಗು ಜಿಲ್ಲಾಧಿಕಾರಿಗಳ ಗಮನಕ್ಕೂ ತಂದಿದ್ದು ಅಕ್ಕಿ ಎಲ್ಲಿಂದ ಸಪ್ಲೆ ಆಗಿದೆಯೊ ಆ ಕಂಪೆನಿಯ ಪರವಾನಿಗೆ ರದ್ದುಗೊಳಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಎಸ್.ಡಿ.ಎಂ.ಸಿ ಆಡಳಿತ ಮಂಡಳಿಯ ಪ್ರಮುಖರು ಆಗ್ರಹಿಸಿದ್ದಾರೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

8 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago