BREAKING NEWS

ಎನ್‌ಡಿಎ ಸೇರಲು ಆರು ಲೋಕಸಭಾ ಸ್ಥಾನ, ಒಂದು ರಾಜ್ಯಸಭಾ ಸ್ಥಾನದ ಬೇಡಿಕೆಯಿಟ್ಟ ಚಿರಾಗ್

ಪಾಟ್ನಾ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಎಲ್‌ಜೆಪಿ(ರಾಮ್‌ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್‌ ಅವರಿಗೆ ಎನ್‌ಡಿಎ ಸಭೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ ಎರಡು ದಿನಗಳ ನಂತರ, ತಮ್ಮ ಪಕ್ಷಕ್ಕೆ ಆರು ಲೋಕಸಭಾ ಸ್ಥಾನಗಳು ಮತ್ತು ಒಂದು ರಾಜ್ಯಸಭಾ ಸ್ಥಾನದ ಬೇಡಿಕೆಯನ್ನು ಬಿಜೆಪಿ ಒಪ್ಪಿಕೊಳ್ಳಬೇಕು ಎಂದು ಚಿರಾಗ್ ಒತ್ತಾಯಿಸಿದ್ದಾರೆ.

ಎಲ್‌ಜೆಪಿ(ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಅವರು ತಮ್ಮ ಪಕ್ಷಕ್ಕೆ ಹಾಜಿಪುರ ಸೇರಿದಂತೆ ಆರು ಲೋಕಸಭಾ ಸ್ಥಾನಗಳು ಮತ್ತು ಒಂದು ರಾಜ್ಯಸಭಾ ಸ್ಥಾನವನ್ನು ನೀಡಬೇಕೆಂದು ಒತ್ತಾಯಿಸಿರುವುದಾಗಿ ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಚಿರಾಗ್ ಅವರನ್ನು ಎನ್ ಡಿಎ ತೆಕ್ಕೆಗೆ ತರಲು ಬಿಜೆಪಿ ಯತ್ನಿಸುತ್ತಿದ್ದು, ಎಲ್‌ಜೆಪಿ (ರಾಮ್ ವಿಲಾಸ್) ಎನ್ ಡಿಎನ ಪ್ರಮುಖ ಮಿತ್ರ ಪಕ್ಷ ಎಂದು ಜೆಪಿ ನಡ್ಡಾ ಅವರು ಬಣ್ಣಿಸಿದ್ದಾರೆ. ಅಲ್ಲದೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಎಲ್‌ಜೆಪಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಹೇಳಿದ್ದಾರೆ.

ಚಿರಾಗ್ ಈಗಾಗಲೇ ಬಿಜೆಪಿ ನಾಯಕರ ಮುಂದೆ ತಮ್ಮ ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ಮೂಲಗಳು ಹೇಳಿವೆ.

ಚಿರಾಗ್ ಅವರಿಗೆ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗುವುದು ಎಂಬ ಊಹಾಪೋಹಗಳಿವೆ. ಆದರೆ ಈ ಬಗ್ಗೆ ಚಿರಾಗ್ ಅವರೇ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಮಯ ತೆಗೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ರೈ ಅವರು ಶುಕ್ರವಾರ ಸಂಜೆ ಚಿರಾಗ್ ಅವರನ್ನು ಎರಡನೇ ಬಾರಿ ಭೇಟಿಯಾಗಿ ಕೇಂದ್ರದ ಎನ್‌ಡಿಎ ಸರ್ಕಾರಕ್ಕೆ ಸೇರುವಂತೆ ಆಹ್ವಾನಿಸಿದ್ದರು.

ಜುಲೈ 18 ರಂದು ನವದೆಹಲಿಯಲ್ಲಿ ಎನ್‌ಡಿಎ ಸಭೆ ನಡೆಯಲಿದೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago